ಉಡುಪಿ,ಜೂನ್,12,2023(www.justkannada.in): ಹುಸಿ ಗ್ಯಾರಂಟಿಗಳ ಭಾರದಿಂದಲೇ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಕುಸಿದು ಬೀಳುವುದು ನಿಶ್ಚಿತ ಎಂದು ಮಾಜಿ ಸಚಿವ ಬಿಜೆಪಿ ಶಾಸಕ ಸುನಿಲ್ ಕುಮಾರ್ ಭವಿಷ್ಯ ನುಡಿದಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಶಾಸಕ ಸುನೀಲ್ ಕುಮಾರ್, ಕಾಂಗ್ರೆಸ್ ಸರ್ಕಾರದ ಆಡಳಿತದ ವೈಖರಿಯ ದಾರಿ ಮತ್ತು ಧಾಟಿಯನ್ನು ನೋಡಿದರೆ ಮುಂದಿನ ದಿನಗಳಲ್ಲಿ ತನ್ನ ಹುಸಿ ಗ್ಯಾರಂಟಿಗಳ ಭಾರದಿಂದಲೇ ಕುಸಿದು ಬೀಳಲಿದೆ. ಈ ಸಂಧರ್ಭದಲ್ಲಿ ರಾಜ್ಯ ಮತ್ತು ಜಿಲ್ಲೆಗಳಲ್ಲಿ ವೈಚಾರಿಕ ಬದ್ಧತೆಯ ಯುವಕರು ಬಿಜೆಪಿಯ ನೇತೃತ್ವವನ್ನು ವಹಿಸಿ ಕೊಳ್ಳುವುದು ಅಗತ್ಯ ಮತ್ತು ಅನಿವಾರ್ಯ ಎಂದು ಹೇಳಿದ್ದಾರೆ.
Key words: government -will -fall – fake guarantees-Former minister -Sunil Kumar