ಎಸ್.ಎಂ ಕೃಷ್ಣ ಅವರ ಅಂತಿಮ ದರ್ಶನ ಪಡೆದ ರಾಜ್ಯಪಾಲ ಗೆಹ್ಲೋಟ್

ಬೆಂಗಳೂರು,ಡಿಸೆಂಬರ್,10,2024 (www.justkannada.in):  ವಯೋಸಹಜ ಕಾಯಿಲೆಯಿಂದ ಇಂದು ನಿಧನರಾದ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರವನ್ನು ಅವರ  ಸದಾಶಿವನಗರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದ್ದು ಗಣ್ಯಾತೀಗಣ್ಯರು ಆಗಮಿಸಿ ಅಂತಿಮ ನಮನ ಸಲ್ಲಿಸುತ್ತಿದ್ದಾರೆ.

ಈ ನಡುವೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು  ಆಗಮಿಸಿ ಎಸ್.ಎಂ ಕೃಷ್ಣ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು. ಬಳಿಕ ಎಸ್ ಎಂಕೆ ಅವರನ್ನ ನೆನೆದು ಭಾವುಕರಾದರು.

ಇನ್ನು ನಟ ಶಿವರಾಜ್ ಕುಮಾರ್,  ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರು ಎಸ್.ಎಂ ಕೃಷ್ಣ ಅವರಿಗೆ ಅಂತಿಮ ನಮನ ಸಲ್ಲಿಸಿದರು.

ಬಳಿಕ ಮಾತನಾಡಿದ ನಟ ಶಿವರಾಜ್ ಕುಮಾರ್, ಶಿಸ್ತು ಅವರ ಮಾಡುವ ಕೆಲಸದಲ್ಲಿತ್ತು.  ನಮ್ಮ ಕುಟುಂಬಕ್ಕೂ ಎಸ್ ಎಂ ಕೃಷ್ಣ ಅವರಿಗೂ ತುಂಬಾ ಆತ್ಮೀಯತೆ ಇತ್ತು.  ಎಸ್ ಎಂ ಕೃಷ್ಣ ಅವರ ನಿಧನ ನೋವುಂಟು ಮಾಡಿದೆ. ಅವರಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನ ನೀಡಲಿ ಎಂದು ಶಿವರಾಜ್ ಕುಮಾರ್ ತಿಳಿಸಿದರು.

Key words: Governor ,Gehlot, last respects , S.M. Krishna