ಬೆಂಗಳೂರು, ಜನವರಿ 24,2025 (www.justkannada.in): ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲರ ನಡುವಿನ ಶೀತಲ ಸಮರ ಮುಂದುವರೆದಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಾಲ್ಕು ವಿಧೇಯಕಗಳಿಗೆ ಅನುಮೋದನೆ ನೀಡದೆ ವಾಪಸ್ ಕಳುಹಿಸಿದ್ದಾರೆ.
ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಮಂಡನೆಯಾಗಿದ್ದ ಕರ್ನಾಟಕ ಹಿಂದೂ ಧಾರ್ಮಿಕಸಂಸ್ಥೆಗಳು ಮತ್ತು ಮುಜರಾಯಿ ವಿಧೇಯಕ, ಕರ್ನಾಟಕ ಮಿನರಲ್ಸ್ ಹಕ್ಕು ಮತ್ತು ಬೇರಿಂಗ್ ಲ್ಯಾಂಡ್ ಟ್ಯಾಕ್ಸ್ ಬಿಲ್ 2024, ಕರ್ನಾಟಕ ಸಹಕಾರಿ ಸೊಸೈಟಿ ಗಳ ತಿದ್ದುಪಡಿ ವಿಧೇಯಕ 2024 ಮತ್ತು ಗದಗ-ಬೆಟಗೇರಿ ವ್ಯಾಪಾರ, ಸಂಸ್ಕೃತಿ ಮತ್ತು ವಸ್ತು ಪ್ರದರ್ಶನ ಪ್ರಾಧಿಕಾರ ವಿಧೇಯಕ 2024 ಅಂಗೀಕಾರವಾಗಿತ್ತು. ಅನುಮೋದನೆಗಾಗಿ ರಾಜ್ಯಪಾಲರ ಕಚೇರಿಗೆ ಕಳುಹಿಸಲಾಗಿತ್ತು. ಆದರೆ, ವಿಧೇಯಕದ ಬಗ್ಗೆ ಸ್ಪಷ್ಟನೆ ಕೋರಿ ರಾಜ್ಯಪಾಲರು ರಾಜ್ಯ ಸರ್ಕಾರಕ್ಕೆ ವಾಪಸ್ಸು ಕಳುಹಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಜ್ಯಪಾಲರ ನಡೆಗೆ ಅಸಮಾಧಾನ ವ್ಯಕ್ತಪಡಿಸಿರುವ ರಾಜ್ಯ ಸರ್ಕಾರ ಕಾನೂನು ಹೋರಾಟ ನಡೆಸಲು ಮುಂದಾಗಿದೆ. ರಾಜ್ಯಪಾಲರ ನಡೆ ವಿರುದ್ಧ ಕಾನೂನು ಕ್ರಮದ ಮೊರೆ ಹೋಗಲು ರಾಜ್ಯ ಸರ್ಕಾರದ ಚಿಂತನೆ ನಡೆಸಿದೆ ಎನ್ನಲಾಗಿದೆ.
Key words: Governors, sent back, bills without, approving