ಮೈಸೂರು ಡಿಸಿ ಅಭಿರಾಮ್ ಜಿ.ಶಂಕರ್ ವರ್ಗಾವಣೆ ಮತ್ತು ದಸರಾ ಬಗ್ಗೆ ಸಚಿವ ಎಸ್.ಟಿ.ಸೋಮಶೇಖರ್ ಪ್ರತಿಕ್ರಿಯಿಸಿದ್ದು ಹೀಗೆ….

ಮೈಸೂರು,ಆಗಸ್ಟ್, 29, 2020(www.justkannada.in) ; ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿಲ್ಲ. ಅಭಿರಾಮ್ ಅವರೇ ತಾವು ಮಸ್ಸೂರಿಗೆ 2 ವರ್ಷ ತರಬೇತಿಗಾಗಿ ತೆರಳಲು ಮುಖ್ಯಮಂತ್ರಿಗಳಿಂದ ಅನುಮತಿ ಪಡೆದುಕೊಂಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸ್ಪಷ್ಟಪಡಿಸಿದರು.

jk-logo-justkannada-logo

ಅಭಿರಾಂ ಜಿ. ಶಂಕರ್ ಅವರು ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, 15 ದಿನಗಳ ಹಿಂದೆಯೇ ಮುಖ್ಯಮಂತ್ರಿಗಳ ಬಳಿ ಹೆಚ್ಚಿನ ತರಬೇತಿಗಾಗಿ ಮಸ್ಸೂರಿಗೆ ಹೋಗಬೇಕಾಗಿ ಕೋರಿಕೊಂಡಿದ್ದರು. ತಮಗೆ ತರಬೇತಿಯಿಂದ ವೃತ್ತಿಜೀವನದಲ್ಲಿ ಅನುಕೂಲವಾಗುತ್ತದೆ ಎಂದು ನನ್ನ ಬಳಿಯೂ ಕೇಳಿಕೊಂಡಿದ್ದರು. ಇಲ್ಲದಿದ್ದರೆ ಅವರನ್ನು ಡಿಸೆಂಬರ್ ವರೆಗೆ ಎಲ್ಲಿಯೂ ಹೋಗದಂತೆ ನಾನೇ ತಡೆಯುತ್ತಿದ್ದೆ ಎಂದರು.

Govt-not-transferred-Abhiram G. Shankar-Minister-S.T.Somashekhar

ದಸರಾ ಆಚರಣೆ ಕುರಿತಂತೆ ವಾರದೊಳಗೆ ತೀರ್ಮಾನ

ಮೈಸೂರು ದಸರಾಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅವರ ಗಮನಕ್ಕೆ ತಂದಿದ್ದೇನೆ. ಇನ್ನು ಹೈಪವರ್ ಕಮಿಟಿಯನ್ನು ಮೈಸೂರಿನಲ್ಲಿಯೇ ರಚನೆ ಮಾಡಬೇಕೆಂಬ ನಿಟ್ಟಿನಲ್ಲಿ ಮಾತುಕತೆ ನಡೆದಿದೆ. ಈ ಬಾರಿ ಆನೆಗಳ ಸವಾರಿ ಸೇರದಂತೆ ಯಾವ ರೀತಿಯಾಗಿ ಆಚರಣೆ ಮಾಡಬೇಕು ಎಂಬ ನಿಟ್ಟಿನಲ್ಲಿ ಹೈಪವರ್ ಕಮಿಟಿಯಲ್ಲಿ ಚರ್ಚಿಸಿ ಇನ್ನು ವಾರದೊಳಗೆ ತೀರ್ಮಾನ ಪ್ರಕಟಿಸಲಾಗುವುದು ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.

ತಿಂಗಳು ಪೂರ ಕೆಲಸ ಮಾಡಿದವರಿಗೆ ರಜೆ

ಒಂದು ತಿಂಗಳು ಹಾಗೂ 2 ತಿಂಗಳು ರಜೆ ಸಿಗದೆ ಕೆಲಸ ನಿರ್ವಹಣೆ ಮಾಡುತ್ತಿರುವವರಿಗೆ ಮಧ್ಯೆ ಮಧ್ಯೆ ರಜೆ ನೀಡಲು ಸೂಚಿಸಲಾಗಿದೆ. ಮೈಸೂರಿನಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅದಕ್ಕೋಸ್ಕರ ನಾನು ಇಂದು ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿಯನ್ನು ತಿಳಿಸುತ್ತೇನೆ ಎಂದು  ಮಾಹಿತಿ ನೀಡಿದರು.

ಮೈಸೂರಿನಲ್ಲಿ  ಪಾಸಿಟಿವ್ ಮತ್ತು ಸಾವಿನ ಸಂಖ್ಯೆಹೆಚ್ಚಾಗುತ್ತಿದ್ದು, ಈ ಬಗ್ಗೆ ಇಂದು ಅಧಿಕಾರಿಗಳ ಸಭೆ ಮಾಡುತ್ತೇನೆ. ಪಾಸಿಟಿವ್ ಹೆಚ್ಚಾಗುತ್ತಿರುವುದಕ್ಕೆ ಕಾರಣ ತಿಳಿದು ಬಂದಿಲ್ಲ. ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡುತ್ತೇನೆ. ವೈದ್ಯಾಧಿಕಾರಿಗಳು ಹಾಗೂ ಅಧಿಕಾರಿಗಳ ನಡುವೆ ವೈಮನಸ್ಸು ಇತ್ತು. ಈಗ ಅದನ್ನು ಬಗೆಹರಿಸಿದ್ದೇನೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದರು.

key words : Govt-not-transferred-Abhiram G. Shankar-Minister-S.T.Somashekhar