ಮೈಸೂರು,ಮಾರ್ಚ್,07,2021(www.justkannada.in) : ಇದು ಗ್ರಾಫಿಕ್ ಯುಗ ಅದಕ್ಕಾಗಿ ಮಾನ ಮರ್ಯಾದೆಗೆ ಅಂಜಿದ್ದೇವೆ. ಆಧುನಿಕ ಯುಗದ ಗ್ರಾಫಿಕ್‌ಗೆ ಬಲಿಪಶು ಆಗುವ ಭಯ ನಮಗೆ ಕಾಡುತಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.
ದೃಶ್ಯ ಮಾಧ್ಯಮಗಳನ್ನು ತಿರುಚುವ, ಧ್ವನಿ ನೀಡುವ ಕೆಲಸ ಆಗುತ್ತಿದೆ. ಗ್ರಾಫಿಕ್ ಮೂಲಕ ಕೈ,ಕಾಲು,ತಲೆ ಕತ್ತರಿಸಿದಂತೆ ಮಾಡಬಹುದು. ಸಿನಿಮಾದಿಂದ ಬಂದ ನನಗೆ ಅದೆಲ್ಲಾ ಗೊತ್ತಿದೆ. ಮಾನ ಮರ್ಯಾದೆ ಗೌರವದ ಕಾರಣಕ್ಕಾಗಿ ಕೋರ್ಟ್ ಮೊರೆ ಹೋಗಿದ್ದೇವೆ ಎಂದಿದ್ದಾರೆ.

ಸುಳ್ಳು ಬೇಗ ಹರಡುತ್ತದೆ, ಅದು ಸುಳ್ಳು ಎಂದು ಸಾಬೀತಾಗಲು ಸಮಯ ಬೇಕು. ಆದರೆ,ಮಾಧ್ಯಮದಲ್ಲಿ ಬಂದ ಕೂಡಲೇ ಅದನ್ನು ಜನ ನಂಬುತ್ತಾರೆ. ಆದರೆ, ಸತ್ಯ ಹೊರಬರುವುದು ಪೊಲೀಸ್ ತನಿಖೆ. ನ್ಯಾಯಲಯದ ಮೂಲಕ. ಅದಕ್ಕಾಗಿ ನಾವೆಲ್ಲಾ ಭಯಪಡುತ್ತಿದ್ದೇವೆ ಎಂದು ತಿಳಿಸಿದರು.
key words : Graphic-human-dignity-Anxiety-Minister-C.P.Yogeshwar