ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ-2024 ಅಂಗೀಕಾರ

ಬೆಂಗಳೂರು, ಮಾರ್ಚ್ 11,2025 (www.justkannada.in): ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024 ಅನ್ನು ಅಂಗೀಕಾರ ಮಾಡಲಾಗಿದೆ.

ಕರ್ನಾಟಕ ವಿಧಾನಮಂಡಲದ ಜಂಟಿ ಪರಿಶೀಲನಾ ಸಮಿತಿಯ ವರದಿಯ ಶಿಫಾರಸ್ಸಿನಂತೆ ಕರ್ನಾಟಕ ವಿಧಾನಸಭೆಯಲ್ಲಿ  ಮಂಡಿಸಲಾದ   2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕವನ್ನು ಪರ್ಯಾಲೋಚಿಸಿ  ಅಂಗೀಕರಿಸುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಪ್ರಸ್ತಾವನೆಯ ವಿಧೇಯಕವನ್ನು ಮಂಡಿಸಿದರು.

ಅದರಂತೆ ಸದನದಲ್ಲಿ ವಿಧೇಯಕವನ್ನು ಅಂಗೀಕರಿಸಲಾಗಿದೆ. ಇನ್ನು ವಿಪಕ್ಷ ಬಿಜೆಪಿ ಮತ್ತು ಜೆಡಿಎಸ್​ ವಿಧೇಯಕ ಮಂಡನೆಗೆ ವಿರೋಧ ವ್ಯಕ್ತಡಿಸಿದರು. ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯನ್ನ ವಿಭಾಗಿಸಿ ಗ್ರೇಟರ್‌ ಬೆಂಗಳೂರು ಮಾಡಲು ಹೊರಟಿರುವ ಸರ್ಕಾರ, ಜಟಾಪಟಿ ನಡುವೆ ವಿಧೇಯಕ ಅಂಗೀಕಾರ ಪಡೆಯಿತು.

Key words: Greater Bengaluru Administration Bill 2024,  passed, Legislative Assembly