ಬೆಂಗಳೂರು, ಫೆಬ್ರವರಿ 28,2025 (www.justkannada.in): ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ಬಳಕೆಯಿಂದಾಗಿ ಇಡ್ಲಿ ಅಸುರಕ್ಷಿತ ಎಂದು ಆರೋಗ್ಯ ಇಲಾಖೆಯ ಪರೀಕ್ಷೆಯಲ್ಲಿ ಬಹಿರಂಗವಾಗಿತ್ತು. ಇದೀಗ ಹಸಿರು ಬಟಾಣಿಯೂ ಅಸುರಕ್ಷಿತ ಎಂಬುದು ಆಹಾರ ಇಲಾಖೆಯ ಪ್ರಯೋಗದಿಂದ ದೃಢಪಟ್ಟಿದೆ.
ಬೆಂಗಳೂರಿನ ವಿವಿಧ ಭಾಗದಲ್ಲಿನ ಸುಮಾರು 36 ಮಾದರಿಯ ಹಸಿರು ಬಟಾಣಿ ಮಾದರಿಗಳನ್ನು ಪಡೆದಿದ್ದ ಆಹಾರ ಇಲಾಖೆ ಅವುಗಳನ್ನು ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಿತ್ತು. ಇದೀಗ ಪ್ರಯೋಗಾಲಯ ವರದಿ ಬಂದಿದ್ದು, 28 ಕ್ಕೂ ಹೆಚ್ಚು ಹಸಿರು ಬಟಾಣಿ ಮಾದರಿಗಳು ಅಸುರಕ್ಷಿತ ಎಂಬ ವಿಚಾರ ಬಹಿರಂಗಗೊಂಡಿದೆ.
ಬಟಾಣಿ ಹಸಿರಾಗಿ ಕಾಣಲು ಕೃತಕ ಬಣ್ಣ ಬಳಸಲಾಗುತ್ತಿದೆ ಎಂಬ ಅಂಶ ವರದಿಯಲ್ಲಿ ಉಲ್ಲೇಖವಾಗಿದೆ. ಕಲರ್ ಬಳಕೆಯಿಂದ ಬಟಾಣಿ ಸಾಮಾನ್ಯಕ್ಕಿಂತ ಹೆಚ್ಚು ಹಸಿರಾಗಿ ಕಾಣುತ್ತಿದ್ದು, ಜನರನ್ನು ಆಕರ್ಶಿಸುತ್ತಿದೆ. ಬಟಾಣಿಯಲ್ಲಿ ಬಣ್ಣ ಬಳಕೆ ಮಾಡುತ್ತಿರುವುದರಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಬಟಾಣಿಯ ಬಣ್ಣ ಕಿಡ್ನಿಯ ಮೇಲೆ ಪರಿಣಾಮ ಬೀರಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ ಎನ್ನಲಾಗಿದೆ . ಈ ಹಿನ್ನೆಲೆಯಲ್ಲಿ ಆರೋಗ್ಯ ಹಾಗೂ ಆಹಾರ ಸುರಕ್ಷತಾ ಇಲಾಖೆ ಕೃತಕ ಬಣ್ಣ ಬಳಸಿ ಬಟಾಣಿ ಮಾರಾಟ ತಡೆಗೆ ಮುಂದಾಗಿದೆ.
Key words: Green peas, harmful elements, Bangalore