ಬೆಂಗಳೂರು,ಜುಲೈ,15,2023(www.justkannada.in): ಸೋಮವಾರ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಗಲಿದ್ದು ಜುಲೈ 19ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದರು.
ಇಂದು ಸುದ್ಧಿಗೋಷ್ಠಿ ನಡೆಸಿ ಗೃಹಲಕ್ಷ್ಮೀ ಯೋಜನೆಗ ಬಗ್ಗೆ ವಿವರ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಜುಲೈ 19ರಿಂದ ಗೃಹಲಕ್ಷ್ಮಿ ಯಜನೆಗೆ ಅರ್ಜಿ ಸಲ್ಲಿಕೆಗೆ ಅವಕಾಶವಿರಲಿದೆ. ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕವಿಲ್ಲ. ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗುತ್ತದೆ. ನಗರಾಡಳಿತ ಕಚೇರಿಗಳಲ್ಲಿಯೂ ಅರ್ಜಿ ಸಲ್ಲಿಸಬಹುದು ಎಂದು ಮಾಹಿತಿ ನೀಡಿದರು.
1.28 ಕೋಟಿ ಕುಟುಂಬ ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯುತ್ತದೆ. ಗೃಹ ಲಕ್ಷ್ಮಿ ಯೋಜನೆಗೆ 1902 ಸಹಾಯವಾಣಿ. ಅರ್ಜಿ ಸಲ್ಲಿಕೆಗೆ ಆಧಾರ್ ಕಾರ್ಡ್ ಕಡ್ಡಾಯವಾಗಿದ್ದು, ಅರ್ಜಿ ಸಲ್ಲಿಕೆಗೆ ಯಾವುದೇ ಡೆಡ್ ಲೈನ್ ಇರಲ್ಲ. ಸೋಮವಾರ ಗೃಹಲಕ್ಷ್ಮಿ ಯೋಜನೆಗೆ ಸೋಮವಾರ ಚಾಲನೆ ಸಿಗಲಿದ್ದು ಕೇಂದ್ರದ ಹಿರಿಯ ನಾಯಕರಿಗೆ ಆಹ್ವಾನ ನೀಡಲಾಗುತ್ತದೆ ಎಂದು ತಿಳಿಸಿದರು.
Key words: Grihalakshmi Yojana- Monday- Application- submission -starts – July 19-Minister- Lakshmi Hebbalkar