ಮೈಸೂರು,ಮಾರ್ಚ್,4,2021(www.justkannada.in): ಗ್ರಾಮ ದೇವತೆ ಹಬ್ಬದ ಆಚರಣೆ ವೇಳೆ ಗುಂಪು ಘರ್ಷಣೆ ನಡೆದು ಹಲವರು ಗಾಯಗೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರು ತಾಲೂಕಿನ ಮೆಲ್ಲಹಳ್ಳಿ ಗ್ರಾಮದಲ್ಲಿ ರಾತ್ರಿ ಈ ಘಟನೆ ನಡೆದಿದೆ. ಗ್ರಾಮ ದೇವತೆ ಹಬ್ಬದ ಸಂದರ್ಭ ನೃತ್ಯ ಮಾಡುವಾಗ ಎರಡೂ ಗುಂಪುಗಳ ನಡುವೆ ಘರ್ಷಣೆ ಉಂಟಾಗಿದ್ದು, ಯುವಕರು ಮಚ್ಚು, ಲಾಂಗ್ ಮಾರಕಾಸ್ತ್ರ ಹಿಡಿದು ಹೊಡೆದಾಟ ನಡೆಸಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಘಟನೆಯ ಬಳಿಕ ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು ಸ್ಥಳದಲ್ಲಿ ಪೊಲೀಸರಿಂದ ಬಂದೋಬಸ್ತ್ ಮಾಡಲಾಗಿದೆ.
Key words: group -clashes – village – celebrates –festival- mysore