ಮೈಸೂರು, ಆಗಸ್ಟ್ 27, 08,2023 (www.justkannada.in): ಆಗಸ್ಟ್ 30ರಂದು ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಹಿನ್ನೆಲೆಯಲ್ಲಿ ಮಹಾರಾಜ ಕಾಲೇಜು ಮೈದಾನದಲ್ಲಿ ಸಾಗಿದ ವೇದಿಕೆ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ.
80 ಅಡಿ ಉದ್ದ, 60ಅಡಿ ಅಗಲ, 8ಅಡಿ ಎತ್ತರದ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗುತ್ತಿದೆ. ವೇದಿಕೆ ಹಿಂಭಾಗ 140ಅಡಿಯ ಬೃಹತ್ ಎಲ್ಇಡಿ ಅಳವಡಿಸಲಾಗುತ್ತಿದೆ. ವಿಐಪಿ, ವಿವಿಐಪಿ ಗಳಿಗೆ ವಿಶ್ರಾಂತಿ ಕೊಠಡಿ ನಿರ್ಮಾಣ ಮಾಡಲಾಗುತ್ತಿದೆ. ಜತೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ ವಾಟರ್ ಪ್ರೂಫ್ ಜರ್ಮನ್ ಟೆಂಟ್ ನಿರ್ಮಾಣ ಮಾಡಲಾಗುತ್ತಿದೆ.
ಕಾರ್ಯಕ್ರಮಕ್ಕೆ ಆಗಮಿಸುವ ಮಹಿಳೆಯರಿಗೆ ಸುಸಜ್ಜಿತ ಶೌಚಾಲಯ ನಿರ್ಮಾಣ, ಕುಡಿಯುವ ನೀರಿನ ವ್ಯವಸ್ಥೆ, ವೇದಿಕೆ ಮುಂಭಾಗ 1ಲಕ್ಷ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಮೈದಾನದ ಸುತ್ತಮುತ್ತ ಕಾಂಗ್ರೆಸ್ ನಾಯಕರ ಪ್ಲೆಗ್ಸ್ ಗಳು ರಾರಾಜಿಸುತ್ತಿವೆ.
ಅಹಿತಕರ ಘಟನೆಗಳು ಜರುಗದಂತೆ ಪೋಲೀಸರು ಮುಂಜಾಗ್ರತ ಕ್ರಮ ಕೈಗೊಂಡಿದ್ದಾರೆ. ವೇದಿಕೆಯ ಸಂಪೂರ್ಣ ಮಾಹಿತಿಯನ್ನು ಪೋಲೀಸರು ಪಡೆಯುತ್ತಿದ್ದಾರೆ. ಹಗಲು ರಾತ್ರಿ ಎನ್ನದೆ ವೇದಿಕೆಯ ನಿರ್ಮಾಣಕ್ಕೆ 500ಕ್ಕೂ ಹೆಚ್ಚು ಕಾರ್ಮಿಕರು ಶ್ರಮಿಸುತ್ತಿದ್ದಾರೆ.