ಬೆಂಗಳೂರು,ಜ,6,2020(www.justkannada.in): ಜಿಎಸ್ಟಿ ಸಂಗ್ರಹದಲ್ಲಿ ಇಲ್ಲಿಯ ವರೆಗೆ ರಾಜ್ಯದ ಸಾಧನೆ 61,245 ಕೋಟಿ ರೂ. ಇದ್ದು, ರಾಷ್ಟ್ರದಲ್ಲೆ ಎರಡನೇ ಸ್ಥಾನದಲ್ಲಿದ್ದೇವೆ. ರಾಜ್ಯದ ಜಿಎಸ್ಟಿ ಬೆಳವಣಿಗೆ ಶೇ. 14.2 ರಷ್ಟು ಇದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.
ಇಂದು ವಿಧಾನಸೌಧದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ, ತೆರಿಗೆ ಸಂಗ್ರಹಣಾ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿ ಚರ್ಚಿಸಿದರು.
ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಿಷ್ಟು…
- ಆರ್ಥಿಕ ವರ್ಷದ ಮೂರು ತ್ರೈಮಾಸಿಕಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಹಾಗೂ ಆಯವ್ಯಯ ಸಿದ್ಧತೆಗೆ ಪೂರ್ವಭಾವಿಯಾಗಿ ಇವತ್ತು ಎಲ್ಲ ತೆರಿಗೆ ಸಂಗ್ರಹಣಾ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ್ದೇನೆ.
- ವಾಣಿಜ್ಯ ತೆರಿಗೆ ಇಲಾಖೆ, ಅಬಕಾರಿ ಇಲಾಖೆ, ಸಾರಿಗೆ ಇಲಾಖೆ, ನೋಂದಣಿ ಮತ್ತು ಮುದ್ರಾಂಕ, ಗಣಿ ಮತ್ತು ಭೂವಿಜ್ಞಾನ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ್ದೇನೆ.
- ರಾಜ್ಯದಲ್ಲಿ ವಾಣಿಜ್ಯ ತೆರಿಗೆ ಇಲಾಖೆಗೆ 76,046 ಕೋಟಿ ರೂ. ತೆರಿಗೆ ಸಂಗ್ರಹ ಗುರಿ ಇದ್ದು, ಡಿಸೆಂಬರ್ 2019 ರ ಅಂತ್ಯದ ವರೆಗೆ 55,984 ಕೋಟಿ ರೂ. ತೆರಿಗೆ ಸಂಗ್ರಹ ಆಗಿದ್ದು, ಶೇ. 73.6 ರಷ್ಟು ಸಾಧನೆ ಆಗಿದೆ.
- ಜಿಎಸ್ಟಿ ಸಂಗ್ರಹದಲ್ಲಿ ಇಲ್ಲಿಯವರೆಗೆ ರಾಜ್ಯದ ಸಾಧನೆ 61,245 ಕೋಟಿ ರೂ. ಇದ್ದು, ರಾಷ್ಟ್ರದಲ್ಲೆ ಎರಡನೇ ಸ್ಥಾನದಲ್ಲಿದ್ದೇವೆ.
- ರಾಜ್ಯದ ಜಿಎಸ್ಟಿ ಬೆಳವಣಿಗೆ ಶೇ. 14.2 ರಷ್ಟು ಇದೆ.
- ದೊಡ್ಡ ಪ್ರಮಾಣದಲ್ಲಿ ಬಸ್ಗಳಲ್ಲಿ ಸರಕು ಸಾಗಣೆ ಮಾಡುವ ಮೂಲಕ ಮತ್ತು ಹೋಟೆಲ್, ರೆಸ್ಟೋರೆಂಟ್ಗಳಲ್ಲಿ ಮತ್ತಿತರ ವಾಣಿಜ್ಯ ಚಟುವಟಿಕೆಗಳಲ್ಲಿ ಜಿಎಸ್ಟಿ ತೆರಿಗೆ ವಂಚನೆ ನಡೆಯುತ್ತಿರುವ ಕುರಿತೂ ಸಹ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ.
- ತಡವಾಗಿ ಜಿಎಸ್ಟಿ ರಿಟರ್ನ್ಸ್ ಫೈಲ್ ಮಾಡುವ ಮತ್ತು ರಿಟರ್ನ್ಸ್ ಫೈಲ್ ಮಾಡದೇ ಇರುವವರ ವ್ಯಾಪಾರ ಸ್ಥಳಗಳಿಗೇ ಭೇಟಿ ನೀಡಿ 551.44 ಕೋಟಿ ತೆರಿಗೆ ಸಂಗ್ರಹಿಸಲಾಗಿದೆ.
- ಇ-ವೇ ತಪಾಸಣೆಯಲ್ಲಿ ನಮ್ಮ ರಾಜ್ಯ ಮೊದಲ ಸ್ಥಾನದಲ್ಲಿದೆ. ಸಂಚಾರಿ ಜಾಗೃತಿ ದಳಗಳ ಮೂಲಕ ಇದನ್ನು ಪರಿಣಾಮಕಾರಿಯಾಗಿ ನಿರ್ವಹಿಸಲಾಗುತ್ತಿದೆ.
- 2020ರ ಏಪ್ರಿಲ್ 1ರಿಂದ ಹೊಸ ಜಿಎಸ್ಟಿ ರಿಟನ್ರ್ಸ್ ನಮೂನೆ ಜಾರಿಗೆ ಬರಲಿದೆ.
10.ಹೊಸ ನಮೂನೆಯನ್ನು ತೆರಿಗೆದಾರರಲ್ಲಿ ಜನಪ್ರಿಯಗೊಳಿಸಲು ಕ್ರಮ ವಹಿಸಲಾಗುತ್ತಿದೆ.
11.ನಮೂನೆ ಪರೀಕ್ಷೆಗೆ ಸಂಬಂಧಿಸಿದಂತೆ ಕರ್ನಾಟಕವು ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ.
12.ಮುಂದಿನ ಮೂರು ತಿಂಗಳಲ್ಲಿ ಅಧಿಕಾರಿಗಳು ಹೆಚ್ಚಿನ ಶ್ರಮ ವಹಿಸಿ, ತೆರಿಗೆ ವಂಚನೆ ಬಗ್ಗೆ ಹೆಚ್ಚಿನ ಗಮನ ಕೊಟ್ಟು, ನಿರೀಕ್ಷೆ ಮೀರಿದ ತೆರಿಗೆ ಸಂಗ್ರಹ ಮಾಡುವಂತೆ ಸೂಚನೆ ನೀಡಲಾಗಿದೆ.
13.ಅಬಕಾರಿ ಇಲಾಖೆಯಲ್ಲಿ ಈ ವರ್ಷ 20,950 ಕೋಟಿ ರೂ. ರಾಜಸ್ವ ಸಂಗ್ರಹದ ವಾರ್ಷಿಕ ಗುರಿ ನಿಗದಿಯಾಗಿದೆ. ಈ ವರೆಗೆ 16,187.95 ಕೋಟಿ ರೂ. ರಾಜಸ್ವ ಸಂಗ್ರಹ ಆಗಿದ್ದು, ಶೇ. 77.23 ರಷ್ಟು ಗುರಿ ಸಾಧನೆ ಆಗಿದೆ.
14.ಕಳೆದ ವರ್ಷ ಇದೇ ಅವಧಿಗೆ ಹೋಲಿಸಿದರೆ 1165.33 ಕೋಟಿ ರೂ. ತೆರಿಗೆ ಸಂಗ್ರಹವಾಗಿದ್ದು, ಬೆಳವಣಿಗೆ ದರ ಶೇ. 7.76 ರಷ್ಟಿದೆ.
15.ಈ ಬಾರಿ ಮದ್ಯದ ಬೆಲೆ ಹೆಚ್ಚಳ ಮಾಡದೆ, ಗುರಿ ಸಾಧನೆ ಆಗಿದೆ ಎಂಬುದು ವಿಶೇಷ.
16.ಅಬಕಾರಿ ಇಲಾಖೆಯ 39 ಸೇವೆಗಳು ‘ಸಕಾಲ’ ಯೋಜನೆ ವ್ಯಾಪ್ತಿಗೆ ತರಲಾಗಿದ್ದು, 25 ಸೇವೆಗಳನ್ನು ಆನ್ಲೈನ್ನಲ್ಲಿ ಒದಗಿಸಲಾಗುತ್ತದೆ.
- ಚಿಲ್ಲರೆ ಮದ್ಯ ಮಾರಾಟ ಲೈಸನ್ಸ್ಗಳು ಹಾಗೂ ಮದ್ಯ ಉತ್ಪಾದನಾ ಘಟಕಗಳ ಲೈಸನ್ಸ್ಗಳನ್ನು ಆನ್ಲೈನ್ ಮೂಲಕ ನವೀಕರಣ ಮಾಡಲಾಗುತ್ತಿದೆ.
18.ಅಲ್ಲದೆ, ಅಕ್ರಮ ಮಾರಾಟ, ತೆರಿಗೆ ವಂಚನೆ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
19.ಸಾರಿಗೆ ಇಲಾಖೆಯಲ್ಲಿ ಒಟ್ಟು 7100 ಕೋಟಿ ರೂ. ತೆರಿಗೆ ಸಂಗ್ರಹ ಗುರಿ ಹೊಂದಿದ್ದೇವೆ. ಸಾರಿಗೆ ಇಲಾಖೆಯಿಂದ 6601.96 ಕೋಟಿ ರೂ ಹಾಗೂ ಸಾರಿಗೆ ಸಂಸ್ಥೆಗಳಿಂದ 498.04 ಕೋಟಿ ರೂ. ಆದಾಯದ ಗುರಿ ಹೊಂದಲಾಗಿದೆ.
20.ಈ ವರೆಗೆ 4864.80 ಕೋಟಿ ರಾಜಸ್ವ ಸಂಗ್ರಹ ಆಗಿದ್ದು, ವಾಹನಗಳ ಮಾರಾಟ ಕುಸಿದಿರುವುದರಿಂದ ಸುಮಾರು 460.20 ಕೋಟಿ ಕೊರತೆ ಆಗಿದೆ.
21.ಈ ಇಲಾಖೆಯಲ್ಲಿ ವರ್ಷಾಂತ್ಯಕ್ಕೆ ಸುಮಾರು 300 ಕೋಟಿ ಕೊರತೆಯಾಗುವ ಸಾಧ್ಯತೆ ಇದೆ.
22.ಮೋಟಾರು ವಾಹನ ಕಾಯ್ದೆ ಉಲ್ಲಂಘನೆ ಪ್ರಕರಣಗಳು ಹಾಗೂ ತೆರಿಗೆ ವಂಚನೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.
23.ಇದನ್ನು ಬೇರೆ ಮೂಲಗಳಿಂದ ಸರಿದೂಗಿಸಲು ಪ್ರಯತ್ನಿಸಲಾಗುವುದು.
24.ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ 11,828 ಕೋಟಿ ರೂ. ರಾಜಸ್ವ ಸಂಗ್ರಹದ ವಾರ್ಷಿಕ ಗುರಿ ಹೊಂದಿದ್ದು, ಈ ವರೆಗೆ 8297.65 ಕೋಟಿ ರೂ. ಸಂಗ್ರಹ ಆಗಿದ್ದು, ಕಳೆದ ವರ್ಷಕ್ಕಿಂತ 410.75 ಕೋಟಿ ರೂ. ಹೆಚ್ಚಳವಾಗಿದೆ.
Key words: GST Growth- 14.2 percent- CM BS Yeddyurappa – meeting