ಕಲಬುರ್ಗಿ,ಅ,15,2019(www.justkannada.in): ಜೆ.ಎನ್.ಯು. ವಿದ್ಯಾರ್ಥಿ ಸಂಘಟನೆ ಮಾಜಿ ಅಧ್ಯಕ್ಷ, ಸಿಪಿಐ ಮುಖಂಡ ಕನ್ಹಯ್ಯ ಕುಮಾರ್ ಅವರ ಉಪನ್ಯಾಸಕ್ಕೆ ನೀಡಿದ್ದ ಅನುಮತಿಯನ್ನ ಗುಲ್ಬರ್ಗಾ ವಿಶ್ವವಿದ್ಯಾನಿಲಯ ರದ್ಧುಗೊಳಿಸಿದೆ.
ಕನ್ಹಯ್ಯ ಕುಮಾರ್ ಇಂದು ಕಲಬುರ್ಗಿ ಭೇಟಿ ನೀಡಲಿದ್ದು ಗುಲಬರ್ಗಾ ವಿ.ವಿ. ಆವರಣದಲ್ಲಿ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು. ವಿವಿಧ ಷರತ್ತು ವಿಧಿಸಿ ಉಪನ್ಯಾಸಕ್ಕೆ ಅನುಮತಿ ನೀಡಲಾಗಿತ್ತು. ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದು ಕನ್ಹಯ್ಯ ಕುಮಾರ್ ಕಾರ್ಯಕ್ರಮಕ್ಕೆ ನಿನ್ನೆ ಕುಲಪತಿಗಳು ಅನುಮತಿ ನೀಡಿದ್ದರು.
ಡಾ.ಬಿ.ಆರ್.ಅಂಬೇಡ್ಕರ್ ಕಂಡ ಆಧುನಿಕ ಭಾರತ ನಿರ್ಮಾಣದಲ್ಲಿ ಯುವಕರ ಪಾತ್ರ ವಿಷಯದ ಮೇಲೆ ಉಪನ್ಯಾಸ ನೀಡಬೇಕಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯ ಆಯೋಜಿಸಿದ್ದ ಕನ್ಹಯ್ಯ ಕುಮಾರ್ ಕಾರ್ಯಕ್ರಮವನ್ನ ಏಕಾಏಕಿ ರದ್ದು ಮಾಡಿದೆ.
ಕನ್ಹಯ್ಯ ಕುಮಾರ್ ಸಂವಾದ ಕಾರ್ಯಕ್ರಮವನ್ನು ವಿಶ್ವೇಶ್ವರಯ್ಯ ಭವನಕ್ಕೆ ಸ್ಥಳಾಂತರ ಮಾಡಲಾಗಿದ್ದು, ವಿ.ವಿ. ಆವರಣದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ರಾಜ್ಯ ಸರ್ಕಾರ ಪ್ರತಿಷ್ಠೆಯಾಗಿ ತೆಗೆದುಕೊಂಡ ಪರಿಣಾಮ ಕಾರ್ಯಕ್ರಮ ರದ್ದು ಮಾಡಲಾಗಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರದ ಧೋರಣೆ ವಿರುದ್ದ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Key words: Gulbarga University – canceled -permission – Kanhaiya Kumar- lecture.