ಬೆಂಗಳೂರು,ಡಿಸೆಂಬರ್,15,2020(www.justkannada.in) : ಗೂಂಡಾಗಿರಿ’ ಕಾಂಗ್ರೆಸ್ ಪಕ್ಷದ ಅವಿಭಾಜ್ಯ ಅಂಗ, ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸುವುದು ಅದರ ಪರಂಪರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಟೀಕಿಸಿದ್ದಾರೆ.
ಇಂದು ವಿಧಾನ ಪರಿಷತ್ತಿನಲ್ಲಿ ಸಭಾಪತಿಗಳನ್ನು ಕೈಗೊಂಬೆ ಮಾಡಿಕೊಂಡು ಸಭಾಪತಿ ಪೀಠದ ಘನತೆಗೆ ಮಸಿ ಬಳಿದಿದ್ದಾರೆ.
ಪ್ರಜಾಪ್ರಭುತ್ವ ದೇಗುಲದ ಪಾವಿತ್ರ್ಯತೆ ಹಾಳುಗೆಡವಿ ಚಾರಿತ್ರಿಕ ಅಪಚಾರವೆಸಗಿದ್ದಾರೆ. ಜನ ಕಾಂಗ್ರೆಸನ್ನು ಕ್ಷಮಿಸುವುದಿಲ್ಲ ಎಂದು ಟ್ವಿಟರ್ ನಲ್ಲಿ ಆಕ್ರೋಶವ್ಯಕ್ತಪಡಿಸಿದ್ದಾರೆ.
key words : Gundagiri-Congress-Party-integral-part-BJP-state-vice president-Vijayendra