ಮೈಸೂರು, ಆಗಸ್ಟ್ 22, 2021 (www.justkannada.in): ನಾಳೆಯಿಂದ ಶಾಲಾ-ಕಾಲೇಜು ಆರಂಭ ಸ್ವಾಗತ ವಿಚಾರ. ಮುಂಜಾಗ್ರತಾ ಕ್ರಮಗಳೊಂದಿಗೆ ಶಾಲೆ ಆರಂಭ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಆದಿಯಾಗಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಇದು ಉತ್ತಮ ಬೆಳವಣಿಗೆ ಎಂದು ವಿಧಾನ ಪರಿಷತ್ ಸದಸ್ಯ ಅಡುಗೂರು ಎಚ್ ವಿಶ್ವನಾಥ್ ತಿಳಿಸಿದರು.
ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇವಲ ನಗರ ಪ್ರದೇಶಗಳಿಗೆ ಮಾತ್ರ ಈ ಕ್ರಮ ಸೀಮಿತವಾಗಬಾರದು. ಗ್ರಾಮೀಣ ಪ್ರದೇಶಗಳಲ್ಲೂ ಕೂಡ ಹೆಚ್ಚಿನ ಮುಂಜಾಗ್ರತೆ ವಹಿಸಬೇಕು. ಶಿಕ್ಷಣ ಇಲಾಖೆ ಮಾತ್ರವಲ್ಲದೆ ಆರೋಗ್ಯ ಇಲಾಖೆ, ಸ್ಥಳೀಯ ಸಂಸ್ಥೆಗಳು ಗಮನಹರಿಸಬೇಕು. ಗ್ರಾಪಂಗಳು ನಮಗೆ ಸಂಬಂಧಿದ ಇಲ್ಲ ಎಂದು ಸುಮ್ಮನಿರಬಾರದು. ಎಲ್ಲರೂ ನಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕು. ಪ್ರಾಮಾಣಿಕವಾಗಿ ಎಲ್ಲಾ ಇಲಾಖೆ ಕಾರ್ಯನಿರ್ವಹಿಸಬೇಕು ಎಂದು ವಿಶ್ವನಾಥ್ ಹೇಳಿದರು.
ವೀಕೆಂಡ್ ಕರ್ಫ್ಯೂಗೆ ವಿರೋಧ: ಮೈಸೂರು ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸುತ್ತಿರುವುದಕ್ಕೆ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ವಿರೋಧ ವ್ಯಕ್ತಪಡಿಸಿದರು. ಮೈಸೂರು ಜಿಲ್ಲೆಯಲ್ಲಿ ಇತ್ತೀಚೆಗೆ ಕೊರೊನಾ ಪಾಸಿಟಿವಿಟಿ ದರ ಕಡಿಮೆಯಾಗಿದೆ. ವೀಕೆಂಡ್ ಕರ್ಫ್ಯೂ ಜಾರಿಯಿಂದ ಸಣ್ಣ ಪುಟ್ಟ ವ್ಯಾಪಾರಸ್ಥರಿಗೆ ತೊಂದರೆಯಾಗುತ್ತಿದೆ. ರಾಜ್ಯದ ಗಡಿ ಭಾಗಗಳಲ್ಲಿ ಬಿಗಿ ಕ್ರಮ ಕೈಗೊಳ್ಳಬೇಕು. ಗಡಿ ಭಾಗದಲ್ಲಿ ಹಣ ಪಡೆದು ವಾಹನಗಳನ್ನು ಒಳಪಡುತ್ತಿದ್ದಾರೆ. ಗಡಿಗಳನ್ನು ಬಂದ್ ಮಾಡಿ, ಬಿಗಿ ಕ್ರಮ ವಹಿಸಬೇಕು. ಆ ಮೂಲಕ ವೀಕೆಂಡ್ ಕರ್ಫ್ಯೂ ರದ್ದು ಮಾಡಬೇಕು ಎಂದು ವಿಶ್ವನಾಥ್ ಆಗ್ರಹಿಸಿದರು.