BJP MLC, H.Vishwanath has also got an alternative site in his wife’s name: Congress leaders
ಮೈಸೂರು, ಜು.08,2024: (www.justkannada.in news) ಎಂಎಲ್ಸಿ ಎಚ್. ವಿಶ್ವನಾಥ್ ಕೂಡ ಮುಡಾದಿಂದ ಬದಲಿ ನಿವೇಶನ ಪಡೆದಿದ್ದಾರೆ. ವಿಶ್ವನಾಥ್ ಪತ್ನಿ ಶಾಂತಮ್ಮ ಅವರ ಹೆಸರಿನಲ್ಲಿ 2017ರಲ್ಲಿ 60×40 ಅಳತೆಯ ಬದಲಿ ನಿವೇಶನ ಪಡೆದಿದ್ದಾರೆ. ಮುಡಾ ಅಧ್ಯಕ್ಷ ಕೆ ಮರೀಗೌಡ ಹೇಳಿಕೆ.
ಮುಡಾ ಹಗರಣ ಪ್ರಕರಣದಲ್ಲಿ ಹಾಲಿ, ಮಾಜಿ ಶಾಸಕರ ಹೆಸರು ಪ್ರಸ್ತಾಪ ಹಿನ್ನೆಲೆ. ಮೈಸೂರಿನಲ್ಲಿ ಕಾಂಗ್ರೆಸ್ ಶಾಸಕರಿಂದ ಸುದ್ದಿಗೋಷ್ಠಿ. ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ. ಸುದ್ದಿಗೋಷ್ಠಿಯಲ್ಲಿ ಮುಡಾ ಅಧ್ಯಕ್ಷ ಕೆ ಮರೀಗೌಡ, ಶಾಸಕರಾದ ಕೆ ಹರೀಶ್ ಗೌಡ, ರಮೇಶ್ ಬಂಡಿಸಿದ್ದೇಗೌಡ, ಎಂಎಲ್ ಸಿ ಡಾ ತಿಮ್ಮಯ್ಯ, ಸೇರಿದಂತೆ ಸ್ಥಳೀಯ ಕಾಂಗ್ರೆಸ್ ನಾಯಕರು ಭಾಗಿ.
ದೇವನೂರು 3ನೇ ಹಂತದ ಬದಲು ಮುಖ್ಯರಸ್ತೆಯಲ್ಲಿ ಎಚ್.ವಿಶ್ವನಾಥ್ ನಿವೇಶನ ಪಡೆದಿದ್ದಾರೆ. ವಿಶ್ವನಾಥ್ ಅವರು ಈಗ ರಾಜಕೀಯವಾಗಿ ದಿವಾಳಿಯಾಗಿದ್ದಾರೆ. ಕೀಳು ಮಟ್ಟದ ರಾಜಕಾರಣ ಮಾಡುತ್ತಿದ್ದಾರೆ. ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಮುಡಾ ಅಧ್ಯಕ್ಷ ಕೆ.ಮರೀಗೌಡ ಟೀಕೆ.
ಮುಡಾದಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಇದೀಗ ತನಿಖೆ ನಡೆಯುತ್ತಿದೆ. ಸಚಿವ ಭೈರತಿ ಸುರೇಶ್ ಸೂಚನೆ ಮೇರೆಗೆ ತನಿಖೆ ನಡೆಯುತ್ತಿದೆ. ಕೂಲಂಕುಷವಾಗಿ ತನಿಖೆ ನಡೆಯಲಿದೆ. ಈ ಹಂತದಲ್ಲಿ ಹೆಚ್ಚು ಮಾತನಾಡುವುದಿಲ್ಲ. ಎಚ್ ವಿಶ್ವನಾಥ್ ಕೀಳುಮಟ್ಟದ ರಾಜಕಾರಣ ಮಾಡೋದನ್ನು ಬಿಡಬೇಕು. ಮುಡಾ ಅಧ್ಯಕ್ಷ ಕೆ ಮರೀಗೌಡ ಹೇಳಿಕೆ.
50-50 ಅನುಪಾತದಲ್ಲಿ ಸಿಎಂ ಕುಟುಂಬ ನಿಯಮಬಾಹಿರ ಸೈಟ್ ಪಡೆದ ಆರೋಪ ವಿಚಾರ. ಇಡೀ ಪ್ರಕರಣದಲ್ಲಿ ಸಿಎಂ ಹಾಗೂ ಅವರ ಕುಟುಂಬ ಕಾನೂನಾತ್ಮಕವಾಗಿ ಇದೆ. ಸಿಎಂ ಬೆಂಬಲಿತ ಶಾಸಕರ ಹೇಳಿಕೆ.
ಇಲ್ಲಿ ಮುಡಾ ಸಿಎಂ ಕುಟುಂಬಕ್ಕೆ 75 ಸಾವಿರ ಚದರ ಅಡಿ ಜಾಗ ಕೊಡಬೇಕಿತ್ತು. ಆದರೂ ಕೊಟ್ಟಿರು 38 ಸಾವಿರ ಚದರ ಅಡಿಗೆ ನಮ್ಮ ನಾಯಕರು ತೃಪ್ತಿ ಪಟ್ಟುಕೊಂಡಿದ್ದಾರೆ. ಅಂತಹವರ ಮೇಲೆ ಸುಳ್ಳು ಆರೋಪ ಮಾಡೋದು ಸರಿಯಲ್ಲ. ಇಂತಹ ಆರೋಪ ಮಾಡುತ್ತಿರುವ ಹೆಚ್.ವಿಶ್ವನಾಥ್ ಕೂಡ ದೇವನೂರು ಬಡಾವಣೆಯಲ್ಲಿ ಬದಲಿ ನಿವೇಶ ಪಡೆದಿದ್ದಾರೆ. ಅವರ ಪತ್ನಿ ಶಾಂತಮ್ಮ ಹೆಸರಲ್ಲಿ ನಿವೇಶನ ಪಡೆದಿದ್ದರು. ನಿವೆಶನ ಸಂಖ್ಯೆ 2,525ರ ಬದಲಾಗಿ ಹೈವೆ ಬಳಿ ಬರುವ ನಿವೇಶನ ಸಂಖ್ಯೆ 307ರನ್ನ ಪಡೆದಿದ್ದಾರೆ. ಅಂತಹವರು ಸಿಎಂ ಬಗ್ಗೆ ಮಾತನಾಡುವಾಗ ಸರಿಯಾಗಿ ಮಾತಾಡಬೇಕು. ಅವರಂತಹ ದಿವಾಳಿ ರಾಜಕಾರಣಿ ಇನ್ನೊಬ್ಬ ಇಲ್ಲ. ಇಡೀ ಪ್ರಕರಣದಲ್ಲಿ ಅಕ್ರಮ ಎಸಗಿರುವ ಎಲ್ಲರ ಬಗ್ಗೆಯೂ ತನಿಖೆ ನಡೆಯುತ್ತಿದ್ದೆ. ಸದ್ಯದರಲ್ಲೇ ಸತ್ಯಾಸತ್ಯತೆ ಹೊರ ಬರಲಿದೆ. ಸುದ್ದಿಗೋಷ್ಟಿಯಲ್ಲಿ ಶಾಸಕ ಹರೀಶ್‌ಗೌಡ ಹಾಗೂ ಮುಡಾ ಅಧ್ಯಕ್ಷ ಮರಿಗೌಡ ಹೇಳಿಕೆ.
key words: BJP MLC, H.Vishwanath , has also got an. alternative site, in his wife’s name, Congress leaders