ಮಂಡ್ಯ,ಜನವರಿ,30,2024(www.justkannada.in): ಮಂಡ್ಯ ತಾಲ್ಲೂಕು ಕೆರೆಗೋಡು ಗ್ರಾಮದಲ್ಲಿ ಹನುಮ ಧ್ವಜ ಇಳಿಸಿದ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸಿದ್ದ ಹಿಂದೂ ಕಾರ್ಯಕರ್ತರ ವಿರುದ್ದ ಎಫ್ ಐಆರ್ ದಾಖಲು ದಾಖಲಾಗಿದೆ.
ತಹಶೀಲ್ದಾರ್ ಶಿವಕುಮಾರ್ ಅವರು ನೀಡಿದ ದೂರಿನನ್ವಯ ಬಿಳಿದೇಗಲು ಗ್ರಾಮದ ಪ್ರತಾಪ್, ಹೊನಗವಳ್ಳಿ ಮಠದ ಅವಿನಾಶ್, ಕೆರೆಗೋಡು ಗ್ರಾಮದ ಪ್ರಕಾಶ್ ಸೇರಿ ಹಲವು ಹಿಂದೂ ಕಾರ್ಯಕರ್ತರ ವಿರುದ್ದ ಕೆರೆಗೋಡು ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಐಪಿಸಿ ಸೆಕ್ಷನ್ 143,353, 149ರಡಿ ಪ್ರಕರಣ ದಾಖಲಾಗಿದೆ. ಕೆರೆಗೋಡು ಗ್ರಾಮದಲ್ಲಿ ಜನವರಿ 28ರಂದು ಹನುಮ ಕೆಳಗಿಳಿಸಿದಕ್ಕೆ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಅಧಿಕಾರಿ ಸಿಬ್ಬಂದಿಗಳನ್ನ ಎಳೆದಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಎಫ್ ಐಆರ್ ದಾಖಲಾಗಿದೆ.
Key words: Hanuman Flag –Controversy-FIR -Filed -Against -Hindu Activists