ಬೆಂಗಳೂರು, ಜುಲೈ 29,2022 (www.justkannada.in) : ಆಗಸ್ಟ್ 13 ರಿಂದ 15 ರವರೆಗೆ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿ ಹರ್ ಘರ್ ತಿರಂಗಾ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ರಾಜ್ಯದ ಎಲ್ಲಾ ಸರ್ಕಾರಿ ನೌಕರರಿಗೆ ಕರೆ ನೀಡಿದ್ದಾರೆ.
ರಾಜ್ಯ ಮಟ್ಟದ ಸ್ವಾತಂತ್ರ್ಯ ದಿನಾಚರಣೆಯ ಕುರಿತು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು. ತಮ್ಮ ಮನೆಗಳ ಮೇಲೆ ರಾಷ್ಟ್ರ ಧ್ವಜ ಹಾರಿಸಿ ಇಡೀ ದೇಶಕ್ಕೆ ಮಾದರಿಯಾಗಲು ರಾಜ್ಯ ಸರ್ಕಾರಿ ನೌಕರರಿಗೆ ಇದೊಂದು ಸದಾವಕಾಶ ಎಂದು ಅವರು ಬಣ್ಣಿಸಿದ್ದಾರೆ.
ರಾಷ್ಟ್ರದೆಲ್ಲೆಡೆಯಂತೆ, ರಾಜ್ಯದಲ್ಲಿಯೂ ಆಗಸ್ಟ್ 13 ರಿಂದ 15 ರವರೆಗೆ ಹರ್ ಘರ್ ತಿರಂಗಾ ಅಂದರೆ ಮನೆ ಮನೆಯ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಅಭಿಯಾನವನ್ನು ಆಯೋಜಿಸಲಾಗಿದೆ. ಭಾರತ ಸ್ವಾತ್ರಂತ್ಯ ಅಮೃತ ಮಹೋತ್ಸವದ ಸಂಸ್ಮರಣೆಯಲ್ಲಿ ಈ ಅವಧಿಯಲ್ಲಿ ಹಗಲು ರಾತ್ರಿ ಎನ್ನದೆ ಮೂರು ದಿನಗಳ ಕಾಲ ಇಡೀ ರಾಷ್ಟ್ರದಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಲು ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ. ಅದರಂತೆ ಈ ಅಭಿಯಾನಕ್ಕೆ ಕರ್ನಾಟದಲ್ಲೂ ಪೂರ್ಣ ಪ್ರಮಾಣದ ಸ್ಪಂದನೆ ದೊರೆಯಬೇಕೆಂಬುದು ರಾಜ್ಯ ಸರ್ಕಾರದ ಸದಾಶಯವಾಗಿದೆ.
ಸಾರ್ವಜನಿಕರಲ್ಲಿ ಮನವಿ !
ಭಾರತದ ಎಲ್ಲಾ ಪ್ರಜೆಗಳಲ್ಲೂ ರಾಷ್ಟ್ರ ಪ್ರೇಮ ಮತ್ತು ರಾಷ್ಟ್ರಭಕ್ತಿಯನ್ನು ಇಮ್ಮಡಿಗೊಳಿಸುವ ಈ ಅಭಿಯಾನದಲ್ಲಿ ಸಾರ್ವಜನಿಕರೂ ಕೂಡಾ ಕೈಮಗ್ಗ ಅಥವಾ ವಿದ್ಯುತ್ ಮಗ್ಗದಿಂದ ಹತ್ತಿ, ಪಾಲಿಯೆಸ್ಟರ್, ಉಣ್ಣೆ ರೇಷ್ಮೆ, ಅಥವಾ ಖಾದಿಯಲ್ಲಿ ತಯಾರಿಸಿರುವ ರಾಷ್ಟ್ರ ಧ್ವಜವನ್ನು ಆಗಸ್ಟ್ 13ರಿಂದ 15 ರವರೆಗೆ ಮೂರು ದಿನಗಳ ಅವಧಿಯಲ್ಲಿ ರಾಜ್ಯಾದ್ಯಂತ ಇರುವ ಕೋಟಿಗೂ ಹೆಚ್ಚು ಮನೆಗಳ ಮೇಲೆ ಹಾರಿಸಿ ದೇಶ ಪ್ರೇಮ ಮೆರೆಯಬೇಕೆಂಬುದು ರಾಜ್ಯ ಸರ್ಕಾರದ ಇಚ್ಛೆಯಾಗಿದೆ. ಆದಕಾರಣ, ತಮ್ಮ ಮನೆಗಳ ಮೇಲೆ ರಾಷ್ಟ್ರ ಧ್ವಜವನ್ನು ಹಾರಿಸುವಂತೆ ಮುಖ್ಯ ಕಾರ್ಯದರ್ಶಿ ಸಾರ್ವಜನಿಕರಲ್ಲಿ ವಿಶೇಷ ಮನವಿ ಮಾಡಿದ್ದಾರೆ.
ಅಲ್ಲದೆ, ರಾಷ್ಟ್ರ ಧ್ವಜದ ಮುಂದೆ ನಿಂತು ಸೆಲ್ವಿ ತೆಗೆದು ಹರ್ ಘರ್ ತಿರಂಗಾ ಅಂತರ್ಜಾಲ ತಾಣ https://harghartiranga.com ರಲ್ಲಿ ಅಪ್ ಲೋಡ್ ಮಾಡುವ ಮೂಲಕ ಪ್ರತಿಯೊಬ್ಬರೂ ರಾಷ್ಟ್ರ ಪ್ರೇಮವನ್ನು ದುಪ್ಪಟು ಗೊಳಿಸುವ ಈ ವಿಶೇಷ ಅಭಿಯಾನದಲ್ಲಿ ಭಾಗವಹಿಸಿ ದೇಶಾಭಿಮಾನವನ್ನು ಪ್ರದರ್ಶಿಸೋಣ ಎಂದು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಹೇಳಿದ್ದಾರೆ.
Key words: Har Ghar -Tiranga -campaign – success-Chief Secretary – State- Govt- Employees
ENGLISH SUMMARY….
Make ‘Har Ghar Tiranga’ campaign successful: CS appeals to State Govt. employees
Bengaluru, July 29, 2022 (www.justkannada.in): Chief Secretary to the Government Vandita Sharma has appealed to all the State Government employees to make the ‘Har Ghar Tiranga’ campaign successful by hoisting the national flag on their houses from August 13 to 15.
She addressed the State-Level Independence Day preparatory meeting on Friday, held at the Vidhana Soudha. “It is a good opportunity for all the State Government employees to exhibit their patriotism by hoisting the tricolor on their houses,” she said.
The Union Government has launched the ‘Har Ghar Tiranga’ campaign from August 13 to 15. ‘Har Ghar Tiranga’ means hoisting national flag on all the houses. “Our country is celebrating the 75th Independence Day this year and the Union Government is observing it as the ‘Azadi Ka Amrit Mahotsav’. The National Flags are allowed to be hoisted on the houses and government offices for all the three days starting from August 13 to 15, day and night. The Union Government has instructed to conduct the campaign in all the states. Accordingly, it is the intention of the State Government to make it successful in our state also,” she explained.
She also appealed to the citizens of the state to step forward and hoist the national flag atop their houses from August 13 to 15. Flags made of handloom cotton, polyster, cotton silk, or khadi can be used.
Citizens are also asked to take a selfie by standing in front of the national flag and post it on the website https://harghartiranga.com, she added.
Keywords: 75th Indian Independence Day/ Har Ghar Tiranga/ Chief Secretary