ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸಭೆ ನಡೆಸಿ ಸೂಕ್ತ ನಿರ್ಧಾರ- ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು,ಜನವರಿ,24,2025 (www.justkannada.in):  ರಾಜ್ಯದಲ್ಲಿ ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ತಡೆಗೆ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಬ್ಯಾಂಕ್ ಗಳಲ್ಲಿ ಸಾಲ ಪಡೆದವರು ಸಾಲ ನೀಡಿದವರು ಇಬ್ಬರಿಗೂ ಕಾನೂನು ಇದೆ. ಬ್ಯಾಂಕ್ ನಿಯಮಗಳ ಪ್ರಕಾರ ರಿಕವರಿ ಮಾಡೋಕೆ ನಿಯಮವಿದೆ.  ಅವರ ರಕ್ಷಣೆ ಮಾಡೋಕು ಕಾನೂನು ಇದೆ.

ಆದರೆ ಮೈಕ್ರೋ ಫೈನಾನ್ಸ್ ನಲ್ಲಿ ಸಾಲ ವಸೂಲಿ ವಿಚಾರದಲ್ಲಿ ಸೂಕ್ತ ಕಾನೂನು ಇಲ್ಲ. ಸಿಎಂ ಸಿದ್ದರಾಮಯ್ಯ ಕೂಡ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.  ಈ ಸಂಬಂಧ ಸಿಎಂ ಸಿದ್ದರಾಮಯ್ಯ ಸಭೆ ಕರೆದಿದ್ದಾರೆ. ಸಭೆಯಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.

Key words: Home Minister, Dr. G. Parameshwar, microfinance, harassment