“ಕಲಾಪದ ಅವಧಿಯನ್ನು ಸರ್ಕಾರ ನಿರ್ಧಾರ ಮಾಡುವುದು ಸರಿಯಲ್ಲ” : ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು,ಫೆಬ್ರವರಿ,25,2021(www.justkannada.in) : ತಾಯಿ ಹೃದಯದವರು ಮಾತ್ರ ಸಂವಿಧಾನವನ್ನು ಅರ್ಥ ಮಾಡಿಕೊಳ್ಳಬಲ್ಲರು. ಕಲಾಪ ಎಷ್ಟು ದಿನ ನಡೆಸಬೇಕು ಎಂಬ ಸ್ವಾತಂತ್ಯ ವಿಧಾನಸಭೆಯ ಅಧ್ಯಕ್ಷರು ಮತ್ತು ವಿಧಾನ ಪರಿಷತ್ತಿನ ಸಭಾಪತಿಗಳಿಗೆ ಇರಬೇಕು. ಕಲಾಪದ ಅವಧಿಯನ್ನು ಸರ್ಕಾರ ನಿರ್ಧಾರ ಮಾಡುವುದು ಸರಿಯಲ್ಲ. ವರ್ಷದಲ್ಲಿ 60 ದಿನಗಳ ಕಾಲ ಕಲಾಪ ನಡೆಯಲೇ ಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

jkಕೇವಲ ರಾಜಕೀಯವಾಗಿ ಮಾತ್ರವಲ್ಲ, ಸಾಮಾಜಿಕವಾಗಿಯೂ ಪ್ರಜಾಪ್ರಭುತ್ವ ಇರಬೇಕು. ಸ್ವಾತಂತ್ರ್ಯ, ಸಮಾನತೆ ಹಾಗೂ ಭಾತೃತ್ವವನ್ನು ಪ್ರಜಾಪ್ರಭುತ್ವ ಒಳಗೊಂಡಿರಬೇಕು. ಈ ಯಾವುದೂ ಇಲ್ಲದಿದ್ದರೆ ದೇಶ ಉಳಿಯುವುದು ಕಷ್ಟ ಎಂದಿದ್ದಾರೆ.

ಸರ್ವಾಧಿಕಾರಿ ಮನಸ್ಥಿತಿ ನಮ್ಮಿಂದ ದೂರ ಆಗಬೇಕು

ಮೌಲ್ಯಗಳ ರಕ್ಷಣೆ ಮತ್ತು ಪ್ರಜಾಪ್ರಭುತ್ವದ ಉಳಿವಿನ ಬಗ್ಗೆ ಈಗ ಗಂಭೀರವಾದ ಚಿಂತನೆ ನಡೆಯಬೇಕು. ಸರ್ವಾಧಿಕಾರಿ ಮನಸ್ಥಿತಿ ನಮ್ಮಿಂದ ದೂರ ಆಗಬೇಕು. ಇದು ಪ್ರತಿಯೊಬ್ಬರ ಜವಾಬ್ದಾರಿ. ಸಂಸದೀಯ ವ್ಯವಸ್ಥೆ ನಮ್ಮ ದೇಶಕ್ಕೆ ಹೊಸದೇನೂ ಅಲ್ಲ. ಬುದ್ಧ ಮತ್ತು ಬಸವಣ್ಣನವರ ಕಾಲದಲ್ಲಿಯೇ ಸಂಸದೀಯ ವ್ಯವಸ್ಥೆ ಇತ್ತು. ಈ ಕಾರಣಕ್ಕಾಗಿಯೇ ಬಸವಣ್ಣನವರು ಅನುಭವ ಮಂಟಪ ಸ್ಥಾಪನೆ ಮಾಡಿದರು ಎಂದರು.

ವಾಟಾಳ್ ನಾಗರಾಜ್ ಬೆಳಗ್ಗೆ ಬಂದರೆ ಕಲಾಪ ಮುಗಿಯುವವರೆಗೆ ಹೋಗುತ್ತಿರಲಿಲ್ಲ

ವಾಟಾಳ್ ನಾಗರಾಜ್ ಅವರು ಶಾಸಕರಾಗಿದ್ದಾಗ ಬೆಳಗ್ಗೆ ಬಂದರೆ ಕಲಾಪ ಮುಗಿಯುವ ವರೆಗೆ ಹೋಗುತ್ತಿರಲಿಲ್ಲ. ಸಚಿವರೇ ಈಗ ಕಲಾಪದಲ್ಲಿ ಭಾಗವಹಿಸುವುದಿಲ್ಲ. ಇನ್ನು ಶಾಸಕರಿಗೆ ಬುದ್ದಿ ಹೇಳುವುದಾದರೂ ಹೇಗೆ? ಎಂದು ಪ್ರಶ್ನಿಸಿದ್ದಾರೆ.

ಚುನಾವಣೆ ಎಂದರೆ ವ್ಯಾಪಾರ, ಹರಾಜು 

Harassment-Duration-Government-Decision-Doing-Not true-Opposition-leader-Siddaramaiah

ಚುನಾವಣೆ ಎಂದರೆ ವ್ಯಾಪಾರ, ಹರಾಜು ಎನ್ನುವಂತಾಗಿದೆ. ಹೀಗಾಗಿ, ಚುನಾವಣಾ ವ್ಯವಸ್ಥೆ ದಿಕ್ಕಾಪಾಲಾಗಿದೆ. ಮಾಧ್ಯಮದವರಂತೂ ಉದ್ಯಮಿ, ಪತ್ರಕರ್ತ, ರಾಜಕಾರಣಿ ಹೀಗೆ ಎಲ್ಲ ಪಾತ್ರ ನಿಭಾಯಿಸುವುದರಿಂದ ಪ್ರಜಾಪ್ರಭುತ್ವದ ನಾಲ್ಕನೇ ಆಧಾರ ಸ್ಥಂಭ ಗಟ್ಟಿಯಾಗಿ ನಿಲ್ಲುವುದಾದರೂ ಹೇಗೆ? ಎಂದು ಪ್ರಶ್ನಿಸಿದ್ದಾರೆ.

ಮತ ಕೇಳಬೇಕಾದರೆ ಹಣ ಕೊಡಲೇಬೇಕು

ಚುನಾವಣೆಯಲ್ಲಿ ಕಣಕ್ಕಿಳಿಯುವ ಅಭ್ಯರ್ಥಿಗಳಿಗೆ ಮೊದಲು ಮತದಾರರೇ ಹಣ ಕೊಟ್ಟು ಆಶೀರ್ವಾದ ಮಾಡುತ್ತಿದ್ದರು. ಆದರೆ, ಪರಿಸ್ಥಿತಿ ಈಗ ಬದಲಾಗಿದೆ. ಮತ ಕೇಳಬೇಕಾದರೆ ಹಣ ಕೊಡಲೇಬೇಕು. ಕ್ರಿಮಿನಲ್‍ಗಳು, ಶ್ರೀಮಂತರು, ಹೊಡಿ-ಬಡಿ ಸಂಸ್ಕೃತಿಯವರು ಚುನಾವಣಾ ಕಣಕ್ಕೆ ಇಳಿಯುತ್ತಿದ್ದಾರೆ ಎಂದು ಬೇಸರವ್ಯಕ್ತಪಡಿಸಿದರು.

ಶಾಸಕರು ರಂಗೋಲಿ ಕೆಳಗೆ ನುಸುಳುತ್ತಾರೆ

ಶಾಸಕರು ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಜಿಗಿಯುವುದನ್ನು ತಪ್ಪಿಸಲು ಕಾನೂನು ಜಾರಿಗೆ ತರಲಾಯಿತು. ಆದರೂ, ಶಾಸಕರು ರಂಗೋಲಿ ಕೆಳಗೆ ನುಸುಳುತ್ತಾರೆ. ಚುನಾವಣಾ ವ್ಯವಸ್ಥೆಯಲ್ಲಿ ಬದಲಾವಣೆ ತರದಿದ್ದರೆ ಸಂವಿಧಾನದ ಮೌಲ್ಯಗಳು ಕುಸಿಯುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ವಿಷಾದವ್ಯಕ್ತಪಡಿಸಿದರು.

ಯಾವುದೇ ಕಾನೂನು ಜಾರಿಗೆ ತರುವ ಮುನ್ನ ಚರ್ಚೆಗೆ ಅವಕಾಶ ಸಿಗಲೇಬೇಕು

ಯಾವುದೇ ಕಾನೂನು ಜಾರಿಗೆ ತರುವ ಮುನ್ನ ಚರ್ಚೆಗೆ ಅವಕಾಶ ಸಿಗಲೇಬೇಕು. ಅವಸರ ಮಾಡಬಾರದು. ವಿಧೇಯಕ ಮಂಡಿಸಿ ಒಂದೇ ದಿನದಲ್ಲಿ ಅಂಗೀಕಾರ ಮಾಡಿ, ಸುಗ್ರೀವಾಜ್ಞೆ ಜಾರಿಗೆ ತರುವ ಅಭ್ಯಾಸ ಒಳ್ಳೆಯದಲ್ಲ ಎಂದಿದ್ದಾರೆ.

ಈಗ ತರಾತುರಿಯಲ್ಲಿ ಕಾನೂನುಗಳನ್ನು ರೂಪಿಸಿ ಜಾರಿಗೆ ತರಲಾಗುತ್ತಿದೆ

ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 1973ರಲ್ಲಿ ಕರ್ನಾಟಕ ಭೂ ಸುಧಾರಣಾ ಕಾಯಿದೆಗೆ ತಿದ್ದುಪಡಿ ತರಲಾಯಿತು. ಅದಕ್ಕೆ ಪೂರ್ವಭಾವಿಯಾಗಿ ವಿಧಾನ ಮಂಡಲದ ಉಭಯ ಸದನಗಳಲ್ಲಿ ಭಾರಿ ಚರ್ಚೆ ನಡೆದಿತ್ತು. ಆದರೆ, ಈಗ ತರಾತುರಿಯಲ್ಲಿ ಕಾನೂನುಗಳನ್ನು ರೂಪಿಸಿ ಜಾರಿಗೆ ತರಲಾಗುತ್ತಿದೆ.

ನಾಮಪತ್ರ ಸಲ್ಲಿಸಿದ ಬಳಿಕ ಅಭ್ಯರ್ಥಿಗಳು ಪ್ರಚಾರಕ್ಕೆ ಹೋಗುವಂತಿರಬಾರದು

Harassment-Duration-Government-Decision-Doing-Not true-Opposition-leader-Siddaramaiah

ಚುನಾವಣಾ ವ್ಯವಸ್ಥೆ ಬದಲಾಗದ ಹೊರತು ಸಂವಿಧಾನದ ಮೌಲ್ಯಗಳ ಕುಸಿತ ತಪ್ಪಿಸಲು ಸಾಧ್ಯವಿಲ್ಲ. ಚುನಾವಣೆಯನ್ನು ಸರ್ಕಾರವೇ ನಡೆಸುವ ವ್ಯವಸ್ಥೆ ಜಾರಿಗೆ ತರಬೇಕು. ನಾಮಪತ್ರ ಸಲ್ಲಿಸಿದ ಬಳಿಕ ಅಭ್ಯರ್ಥಿಗಳು ಪ್ರಚಾರಕ್ಕೆ ಹೋಗುವಂತಿರಬಾರದು. ಒಟ್ಟಾರೆ ವ್ಯವಸ್ಥೆಯಲ್ಲಿ ಸುಧಾರಣೆ ತರಬೇಕಾದರೆ ರಾಜಕೀಯ ಪಕ್ಷಗಳಲ್ಲಿಯೂ ಬದಲಾವಣೆ ಅನಿವಾರ್ಯ ಎಂದು ಸಲಹೆ ನೀಡಿದ್ದಾರೆ.

ENGLISH SUMMARY…

Government should not decide on fixing session duration: Opposition leader Siddaramaiah
Bengaluru, Feb. 25, 2021 (www.justkannada.in): ‘Only people with a mother’s heart can understand our Constitution. The freedom of fixing the duration of cabinet sessions should be with the Speaker of Assembly and Chairman of Legislative Council. The government should not fix the duration of sessions. Sessions should be held for 60 days in a year compulsorily,” opined opposition leader Siddaramaiah.

I am- building - Ram Mandir -my hometown-Former CM- Siddaramaiah.
siddaramaih#profile..

“Not only politically, but democracy should also exist socially too. There should be independence, equality, and brotherhood in democracy. Existence of our country will be difficult without all this,” he added.
“There is a need for serious thinking on protection of values and democracy. Dictatorship mindset should go and it is the responsibility of all of us. Parliamentary set-up is not new for our country. It existed even during the time of Buddha and Basavanna. That is the reason why Basavanna established Anubhaava Mantapa.”
He said it will not be possible to stop the falling of values without changing the election system. “A system should come where the government itself should conduct the elections. There should be no opportunity for the candidates to go out for campaigning after submitting their nominations. Change in political parties is also required for the overall change in the system,” he opined.
Keywords: Opposition leader Siddaramaiah/ Session duration/ government should not fix

key words : Harassment-Duration-Government-Decision-Doing-Not true-Opposition-leader-Siddaramaiah