ಬೆಂಗಳೂರು,ಅಕ್ಟೋಬರ್,16,2024 (www.justkannada.in): ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ನನ್ನ ಪಾತ್ರವಿಲ್ಲ. ಆದರೂ ಇಡಿಯವರು ನನ್ನನ್ನು ಬಂಧಿಸಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಹೆಸರು ಹೇಳುವಂತೆ ಕಿರುಕುಳ ನೀಡಿದ್ದಾರೆ ಎಂದು ಮಾಜಿ ಸಚಿವ ಬಿ.ನಾಗೇಂದ್ರ ಆರೋಪಿಸಿದರು.
ಇಂದು ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಬಿ.ನಾಗೇಂದ್ರ, ನಾನು ಹಗರಣದಲ್ಲಿ ಯಾವುದೇ ತಪ್ಪು ಮಾಡಿಲ್ಲ. ಆದರೂ ನನ್ನನ್ನ ಬಂಧಿಸಿ ಇಡಿ ಅಧಿಕಾರಿಗಳು ಕಿರುಕುಳ ನೀಡಿದ್ದಾರೆ. ಸಿಎಂ ಮತ್ತು ಡಿಸಿಎಂ ಹೆಸರು ಹೇಳುವಂತೆ ಕಿರುಕುಳ ನೀಡಿದ್ದಾರೆ. ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಕೇಂದ್ರ ಸರ್ಕಾರ ಷಡ್ಯಂತ್ರ ನಡೆಸಿದೆ ಎಂದರು.
ಇಡಿಯವರು ನನ್ನನ್ನು ಬಂಧಿಸಿ 3 ತಿಂಗಳ ಕಾಲ ಕಿರುಕುಳ ನೀಡಿದ್ದಾರೆ. ಬಿಜೆಪಿಯ ಹಿರಿಯ ನಾಯಕರ ಒತ್ತಡದಿಂದ ಹೀಗೆ ಮಾಡಿದ್ದಾರೆ. ಹಣ ವರ್ಗಾವಣೆ ಮಾಡಲು ನನ್ನಿಂದ ಯಾವುದೇ ಶಿಫಾರಸ್ಸು ಆಗಿಲ್ಲ. ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸಲು ಷಡ್ಯಂತ್ರ ನಡೆದಿದೆ. ಎಸ್ ಐಟಿ ಅಧಿಕಾರಿಗಳು ಕೂಡ ಯಾವ ಸಿಬಿಐ, ಇಡಿಗಿಂತ ಕಡಿಮೆ ಇಲ್ಲ. ಇಡಿ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಕೆಲಸ ಮಾಡಿದ್ದಾರೆ ಎಂದು ಕಿಡಿಕಾರಿದರು.
Key words: Harassment, ED, CM, DCM, names, Former Minister, B. Nagendra