ನವದೆಹಲಿ, ಅ,24,2019(www.justkannada.in): ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗುತ್ತಿದ್ದು ಎರಡು ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.
ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದ್ದು, ಮಹಾರಾಷ್ಟ್ರದಲ್ಲಿ ಬಿಜೆಪಿ, ಶಿವಸೇನಾ 179 ಕ್ಷೇತ್ರಗಳಲ್ಲಿ, ಕಾಂಗ್ರೆಸ್ ಎನ್ ಸಿಪಿ 87 ಕ್ಷೇತ್ರಗಳಲ್ಲಿ, ಇತರೇ 15 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಇನ್ನು ಹರಿಯಾಣದಲ್ಲಿ ಬಿಜೆಪಿ 44 ಕಾಂಗ್ರೆಸ್ 30 ಮತ್ತು ಇತರೇ 16 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಎರಡು ರಾಜ್ಯಗಳ ವಿಧಾನಸಭೆ ಚುನಾವಣೆಯ ಮತದಾನ ಅಕ್ಟೋಬರ್ 21 ರಂದು ನಡೆದಿತ್ತು. ಕಳೆದ ಏಪ್ರಿಲ್ ಮೇ ತಿಂಗಳಿನಲ್ಲಿ ಲೋಕಸಭಾ ಚುನಾವಣೆ ಬಳಿಕ ನಡೆಯುತ್ತಿರುವ ಮೊದಲ ವಿಧಾನಸಭಾ ಚುನಾವಣೆ ಇದಾಗಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆ ಮತ್ತು ಬಿಜೆಪಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದು, ಕಾಂಗ್ರೆಸ್ ಮತ್ತು ಎನ್ ಸಿಪಿ ಮೈತ್ರಿ ಮಾಡಿಕೊಂಡಿವೆ.
Key words: Haryana- Maharashtra -Election –Result-BJP- lead