ಬೆಂಗಳೂರು,ಮೇ,27,2023(www.justkannada.in): ರಾಜಭವನದ ಗಾಜಿನಮನೆಯಲ್ಲಿ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುತ್ತಿದ್ದು ಸಚಿವರಾಗಿ ಡಾ.ಹೆಚ್. ಸಿ.ಮಹದೇವಪ್ಪ ಸತ್ಯ ಮತ್ತು ನಿಷ್ಠೆಯಿಂದ ಪ್ರಮಾಣವಚನ ಸ್ವೀಕರಿಸಿದರು.
ನೂತನ ಸಚಿವರಾಗಿ ಎನ್. ಚಲುವರಾಯಸ್ವಾಮಿ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಹಾಗೆಯೇ ನೂತನ ಸಚಿವರಾಗಿ ಈಶ್ವರ ಖಂಡ್ರೆಯವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ದಿನೇಶ್ ಗುಂಡೂರಾವ್, ಶರಣಬಸಪ್ಪ ದರ್ಶನಾಪುರ, ಶಿವಾನಂದ್ ಪಾಟೀಲ್ ಸಹ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
Key words: HC Mahadevappa- Ishwar Khandre- Dinesh Gundurao -sworn – new ministers.