ಬೆಂಗಳೂರು, ಮೇ, 2, 2024 (www.justkannada.in): ತಮ್ಮ ಕುಟುಂಬವನ್ನ ‘420 ಕುಟುಂಬ’ ಎಂಬ ಟೀಕಿಸಿದ್ದ ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿಗೆ ತಿರುಗೇಟು ನೀಡಿರುವ ಸಂಸದ ಡಿ.ಕೆ ಸುರೇಶ್, ದೇವೇಗೌಡರ ಕುಟುಂಬದ ಆಸ್ತಿ ಪೆನ್ ಡ್ರೈವ್. ಇನ್ನು ತೆನೆ ಹೊತ್ತ ಮಹಿಳೆ ಪೆನ್ಡ್ರೈವ್ ಹೊರಬೇಕಾಗುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಡಿ.ಕೆ ಸುರೇಶ್, ನಾನು ಅವರ ಕುಟುಂಬವನ್ನು 420 ಎಂದು ಕರೆಯುವುದಿಲ್ಲ. ಏಕೆಂದರೆ ಅದು ಮಾಜಿ ಪ್ರಧಾನಿಗಳ ಕುಟುಂಬ. ದೇವೇಗೌಡರ ಕುಟುಂಬದ ಆಸ್ತಿ ಪೆನ್ಡ್ರೈವ್. ಇನ್ನು ತೆನೆ ಹೊತ್ತ ಮಹಿಳೆ ಪೆನ್ಡ್ರೈವ್ ಹೊರಬೇಕಾಗುತ್ತದೆ ಎಂದು ಲೇವಡಿ ಮಾಡಿದರು.
ಎಲ್ಲವನ್ನೂ ದೇಶ ಹಾಗೂ ರಾಜ್ಯದ ಜನ ಗಮನಿಸುತ್ತಿದ್ದಾರೆ. ಬೇಕಿದ್ದರೆ ಅವರಿಗೆ ಮನಸ್ಸಿಗೆ ಬಂದಹಾಗೆ ಬೈದುಕೊಳ್ಳಲಿ. ಹಾಸನದ ಹೆಣ್ಣುಮಕ್ಕಳ ಮರ್ಯಾದೆ ಉಳಿಸಬೇಕು ಅಷ್ಟೇ. ನಾವು ಅವರನ್ನ ಕೆಣಕಿಲ್ಲ ಎಂದು ಡಿ.ಕೆ ಸುರೇಶ್ ತಿಳಿಸಿದರು.
Key words: HD Deve Gowda, Family, Pen Drive, DK Suresh