ಬೆಂಗಳೂರು,ಫೆಬ್ರವರಿ,28,2022(www.justkannada.in): ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿ 5 ದಿನಗಳು ಕಳೆದಿದ್ದು ರಷ್ಯಾ ತನ್ನ ದಾಳಿಯನ್ನ ಮುಂದುರೆಸಿದೆ. ಈ ಮಧ್ಯೆ ರಷ್ಯಾ ದಾಳಿಯಿಂದಾಗಿ ಉಕ್ರೇನ್ ಜನತೆ ತತ್ತರಿಸಿದ್ದಾರೆ.
ಇನ್ನು ವಿದ್ಯಾಭ್ಯಾಸಕ್ಕೆಂದು ತೆರಳಿರುವ ಭಾರತೀಯ ವಿದ್ಯಾರ್ಥಿಗಳು ಅಲ್ಲಿ ಸಂಕಷ್ಟಕ್ಕೆ ಸಿಲುಕಿದ್ದು ಅವರನ್ನ ರಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಈ ಸಂಬಂಧ ಪ್ರಧಾನಿ ಮೋದಿಗೆ ಪತ್ರ ಬರೆದಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಉಕ್ರೇನ್ ನಲ್ಲಿ ಭಾರತೀಯ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರನ್ನ ತರಿತ್ವವಾಗಿ ಸ್ಥಳಾಂತರಿಸಲು ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದ್ದಾರೆ.
ರಷ್ಯಾ ನಡುವಿನ ಯುದ್ಧದ ಮಧ್ಯೆ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ಕುರಿತು ಪ್ರಧಾನಿ ಮೋದಿ ಇಂದು ಉನ್ನತ ಮಟ್ಟದ ಸಭೆಯನ್ನು ಕರೆದಿದ್ದಾರೆ. ಭಾರತೀಯ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಕೆಲವು ಕೇಂದ್ರ ಸಚಿವರು ಉಕ್ರೇನ್ ನ ನೆರೆ ದೇಶಗಳಿಗೆ ತೆರಳಬಹುದು ಎಂಬ ಮಾಹಿತಿ ಲಭ್ಯವಾಗಿದೆ.
Key words: HD Deve Gowda -letter – PM- Modi.