ಮೈಸೂರು,ಜು,22,2019(www.justkannada.in): ಗ್ರಾಮಗಳಲ್ಲಿ ಯಾವುದೇ ರೀತಿಯ ದಬ್ಬಾಳಿಕೆ, ಗಲಭೆ ಎಬ್ಬಿಸದಂತೆ ರೌಡಿಶೀಟರ್ ಗಳೀಗೆ ಮೈಸೂರಿನ ಹೆಚ್.ಡಿ ಕೋಟೆ ಠಾಣಾ ಪೊಲೀಸರು ವಾರ್ನಿಂಗ್ ಕೊಟ್ಟಿದ್ದಾರೆ.
ರೌಡಿಶೀಟರ್ ಗಳನ್ನ ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ನಡೆಸಿದ ಪೊಲೀಸರು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ರೌಡಿ ಶೀಟರ್ ಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಎಚ್. ಡಿ ಕೋಟೆ ಪೊಲೀಸ್ ಠಾಣೆಯ ಪಿಎಸ್ಐ ಎಂ. ನಾಯಕ್ ಮತ್ತು ಸರ್ಕಲ್ ಇನ್ಸ್ ಪೆಕ್ಟರ್ ನೇತೃತ್ವದಲ್ಲಿ ರೌಡಿಶೀಟರ್ ಗಳಿಗೆ ಖಡಕ್ ವಾರ್ನಿಂಗ್ ನೀಡಲಾಯಿತು.
ಗ್ರಾಮಗಳಲ್ಲಿ ಯಾವುದೇ ರೀತಿಯ ದಬ್ಬಾಳಿಕೆ, ಗಲಭೆ ಎಬ್ಬಿಸಬಾರದು. ಕಾನೂನಿನ ನಿಯಮ ಉಲ್ಲಂಘಿಸಿದೆ ಸಾಮಾನ್ಯ ವ್ಯಕ್ತಿಗಳಂತೆ ಇರಬೇಕೆಂದು ಎಚ್ಚರಿಕೆ ನೀಡಿದರು. ಅಲ್ಲದೆ ರೌಡಿಶೀಟರ್ ಗಳಿಂದ ಯಾವುದೇ ಕಾನೂನು ಬಾಹೀರ ಚಟುವಟಿಕೆಯಲ್ಲಿ ಭಾಗಿಯಾಗುವುದಿಲ್ಲವೆಂದು ಬಾಂಡ್ ಬರೆಸುಕೊಂಡರು.
Key words: HD kote- Police officers – gave- khadak warning – rowdy sheeters