ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಸೋಲು- ಬೇಸರ ವ್ಯಕ್ತಪಡಿಸಿದ ಹೆಚ್.ಡಿ ಕುಮಾರಸ್ವಾಮಿ.

ಮಂಡ್ಯ,ಜೂನ್,4,2024 (www.justkannada.in): ಮಂಡ್ಯ ಕ್ಷೇತ್ರದಲ್ಲಿ 2 ಲಕ್ಷ ಮತಗಳ ಅಂತರದಿಂದ ಕಾಂಗ್ರೆಸ್ ಸೋಲುಣಿಸಿ ಸಂತಸದಲ್ಲಿರುವ  ಜೆಡಿಎಸ್ ಅಭ್ಯರ್ಥಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಇತ್ತ ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಸೋಲಿಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಹಾಸನದ ಸೋಲು ಬಹಳ ಆಘಾತ ತಂದಿದೆ.  ಹಾಸನದಲ್ಲಿ ಈ ಫಲಿತಾಂಶ ನಿರೀಕ್ಷೆ ಮಾಡಿರಲಿಲ್ಲ. ನಮ್ಮ ಮೈತ್ರಿಕೂಟ ಇನ್ನೂ ನಾಲ್ಕೈದು ಸ್ಥಾನ ಗೆಲ್ಲಬಹುದಿತ್ತು. ನಮ್ಮ ತಪ್ಪಿನಿಂದ ನಾವು ನಾಲ್ಕೈದು ಸ್ಥಾನಗಳನ್ನ ಕಳೆದುಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಹೆಚ್ ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಪಕ್ಷೇತರವಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಶ್ ವಿರುದ್ದ ಹೀನಾಯವಾಗಿ ಸೋಲನುಭವಿಸಿದ್ದರು. ಇದೀಗ ಹೆಚ್.ಡಿ ಕುಮಾರಸ್ವಾಮಿ ಮಂಡ್ಯದಲ್ಲಿ ಗೆಲುವು ಸಾಧಿಸಿ ತಮ್ಮ ಶಕ್ತಿಯನ್ನ ತೋರಿಸಿದ್ದಾರೆ.

Key words: HD Kumaraswamy, expressed, JDS, Hassan