ಲೈಂಗಿಕ ದೌರ್ಜನ್ಯ ಆರೋಪ ಕೇಸ್: ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ಹೆಚ್.ಡಿ ರೇವಣ್ಣ

ಬೆಂಗಳೂರು,ಮೇ,3,2024 (www.justkannada.in): ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನ ಮಾಜಿ ಸಚಿವ ಹೆಚ್.ಡಿ ರೇವಣ್ಣ ಹಿಂಪಡೆದಿದ್ದಾರೆ.

ಪ್ರಕರಣಕ್ಕೆ  ಸಂಬಂಧಿಸಿದಂತೆ ಬಂಧನ ಭೀತಿಯಿಂದ ಶಾಸಕ ಹೆಚ್ ಡಿ ರೇವಣ್ಣ ನಿನ್ನೆ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ನಿನ್ನೆ ಅರ್ಜಿ ವಿಚಾರಣೆಯನ್ನ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದಿಗೆ ಮುಂದೂಡಿತ್ತು.

ಇಂದು  ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ಎಸ್‌ಐಟಿ ಹೇಳಿಕೆ ಹಿನ್ನೆಲೆಯಲ್ಲಿ ಇದೀಗ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿಯನ್ನು  ಹಿಂಪಡೆದಿದ್ದಾರೆ ಎನ್ನಲಾಗಿದೆ.

ಎಸ್‌ ಐಟಿ ಪರ  ವಾದ ಮಂಡಿಸಿದ ಎಸ್‌ ಪಿಪಿ ಬ್ಯಾತ ಎನ್ ಜಗದೀಶ್, ಎಚ್ ಡಿ ರೇವಣ್ಣ ವಿರುದ್ಧ ಅತ್ಯಾಚಾರದ ಆರೋಪ ಸೇರಿಸಿಲ್ಲ. ಅತ್ಯಾಚಾರ ಆರೋಪವಿಲ್ಲದಿರುವುದರಿಂದ ನಿರೀಕ್ಷಣಾ ಜಾಮೀನು ಅಗತ್ಯವಿಲ್ಲ. ಪ್ರಕರಣದಲ್ಲಿ ಜಾಮೀನು ನೀಡಬಹುದಾದ  ಆರೋಪಗಳು ಮಾತ್ರ ಇವೆ ಎಂದಿದ್ದಾರೆ.

ಹೀಗಾಗಿ ನಿರೀಕ್ಷಣಾ ಜಾಮೀನು ಅರ್ಜಿ ಊರ್ಜಿತವಲ್ಲ.ಈ ದಿನದವರೆಗೆ ಜಾಮೀನು ರಹಿತ ಪ್ರಕರಣ ದಾಖಲಿಸಿಲ್ಲ. ಎಸ್ ಪಿಪಿ  ನೀಡಿದ ಮಾಹಿತಿಯನ್ನ ಕೋರ್ಟ್ ದಾಖಲಿಸಿಕೊಂಡಿತು. ಎಸ್‌ಐಟಿ ಹೇಳಿಕೆ ಹಿನ್ನೆಲೆಯಲ್ಲಿ ಇದೀಗ ಎಚ್ ಡಿ ರೇವಣ್ಣ ಅರ್ಜಿ ವಾಪಸ್ ಪಡೆದುಕೊಂಡಿದ್ದಾರೆ.

Key words: HD Revanna, anticipatory bail, application