ರಾಮನಗರ, ಆಗಸ್ಟ್,10,2024 (www.justkannada.in): ಇಂದು ನಡೆದ ಮೈಸೂರು ಚಲೋ ಪಾದಯಾತ್ರೆ ಸಮಾರೋಪ ಸಮಾರಂಭದಲ್ಲಿ ತಮ್ಮ ವಿರುದ್ಧ ಆರೋಪಗಳ ಸುರಿಮಳೆಗೈದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ತಿರುಗೇಟು ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್, ಹೆಚ್.ಡಿಕೆಗೆ ಹುಚ್ಚು ಹಿಡಿದಿದೆ. ಅವರನ್ನ ಹುಚ್ಚಾಸ್ಪತ್ರೆಗೆ ಸೇರಿಸಬೇಕು ಎಂದು ಲೇವಡಿ ಮಾಡಿದರು.
ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಹೇಳಿಕೆ ನೋಡುತ್ತಿದ್ದರೆ ಅವರಿಗೆ ಆದಷ್ಟು ಬೇಗ ಹುಚ್ಚಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕು ಎಂದರು.
ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರ ಅಳಿಯ ಸಿದ್ಧಾರ್ಥ ಅವರ ಸಾವಿಗೆ ಕಾರಣ ಯಾರು ಎಂದು ಪ್ರಶ್ನಿಸಿದ ಕುಮಾರಸ್ವಾಮಿ ವಿರುದ್ದ ಕಿಡಿಕಾರಿದ ಡಿಕೆ ಶಿವಕುಮಾರ್ , ‘ನಾನು ಅವರ ತಂದೆ ವಿರುದ್ಧ 1985ರಲ್ಲಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದೆ. ಬಂಗಾರಪ್ಪನವರ ಸಂಪುಟದಲ್ಲಿ ಸಚಿವನಾಗಿದ್ದೆ. ನನ್ನ ಹಾಗೂ ಎಸ್.ಎಂ ಕೃಷ್ಣ ಅವರ ನಡುವಣ ಸಂಬಂಧ ಏನು ಎಂದು ಕುಮಾರಸ್ವಾಮಿಗೆ ಏನು ಗೊತ್ತಿದೆ? ಅವರಿಗೆ ಹುಚ್ಚು ಹಿಡಿದಿದೆ. ಅವರಿಗೆ ಸೂಕ್ತ ಚಿಕಿತ್ಸೆ ಕೊಡಿಸಿ ಎಂದು ಅವರ ಪಕ್ಷದವರಿಗೆ, ನಾಯಕರಿಗೆ ಹೇಳುತ್ತೇನೆ ಎಂದರು.
ಬಡವರ ಆಸ್ತಿ ಲೂಟಿ ಮಾಡಿದ್ದಾರೆ ಎಂಬ ಆರೋಪಕ್ಕೂ ಕೌಂಟರ್ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್, ‘ನಾನು ಯಾವ ಬಡವನ ಆಸ್ತಿ ಲೂಟಿ ಮಾಡಿದ್ದೇನೆ. ಆತನನ್ನು ಕರೆದುಕೊಂಡು ಬಂದು ನನ್ನ ಮುಂದೆ ನಿಲ್ಲಿಸಲಿ. ನಾವು ಬಡವರಿಗೆ ತೊಂದರೆ ನೀಡಿ ಆಸ್ತಿ ಕಿತ್ತುಕೊಂಡಿರುವುದು ನಮ್ಮ ಜಾಯಮಾನದಲ್ಲಿಲ್ಲ ಎಂದು ಹರಿಹಾಯ್ದರು.
Key words: HDK, admitted, mental hospital, DCM DK Shivakumar