ಮೈಸೂರು,ಸೆಪ್ಟಂಬರ್,20,2024 (www.justkannada.in): ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಡಿನೋಟಿಫಿಕೇಷನ್ ಆರೋಪ ವಿಚಾರ ಸಂಬಂಧ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಕುಮಾರಸ್ವಾಮಿ ಯಾವಗಲೂ ಹಿಟ್ ಅಂಡ್ ರನ್ ಕೇಸ್. ತಮ್ಮ ಮೇಲಿನ ಎಲ್ಲಾ ಆರೋಪಕ್ಕೆ ಹಿಟ್ ಅಂಡ್ ರನ್ ರೀತಿ ಮಾತನಾಡಿ ಹೋಗುತ್ತಾರೆ ಎಂದು ಟೀಕಿಸಿದರು.
ಇಂದು ಮೈಸೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದಾಖಲೆಗಳನ್ನ ನಿನ್ನೆ ಸಚಿವರು ಬಿಡುಗಡೆ ಮಾಡಿದ್ದಾರೆ. ನಾನು ಆ ದಾಖಲೆಗಳನ್ನ ನೋಡುತ್ತೇನೆ. ಆ ಭೂಮಿ ಕುಮಾರಸ್ವಾಮಿ ಭಾಮೈದನಿಗೆ ರಿಜಿಸ್ಟರ್ ಆಗಿದೆ. ಅತ್ತೆಗೆ ಹಲವರು ಜಿಪಿಎ ಮಾಡಿಕೊಟ್ಟಿದ್ದಾರೆ. ಇದು ಬಹಳ ಗಂಭೀರವಾದ ಪ್ರಕರಣ. ನೋಡೊಣಾ ಆ ಫೈಲನ್ನ ತರಿಸಿ ಪರಿಶೀಲನೆ ಮಾಡುತ್ತೇನೆ ಎಂದರು.
ರಾಜ್ಯದಲ್ಲಿ ಗಣೇಶ ಮೂರ್ತಿ ಗಲಾಟೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಪ್ರತಿನಿತ್ಯ ಏನು ಗಲಾಟೆ ನಡೆಯುತ್ತಿಲ್ಲ.ಇದುವರೆಗೆ ಎರಡು ಪ್ರಕರಣ ನಡೆದಿವೆ. ಘಟನೆಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ. ಮುಂಜಾಗೃತ ಕ್ರಮಗಳನ್ನ ಕೈಗೊಳ್ಳಲು ತಿಳಿಸಿದ್ದೇನೆ. ನಾಗಮಂಗಲ ಪ್ರಕರಣದಲ್ಲಿ ಡಿವೈಎಸ್ಪಿ, ಇನ್ಸ್ ಪೆಕ್ಟರ್ ಅಮಾನತು ಮಾಡಿದ್ದೇವೆ ಎಂದರು.
ಮುನಿರತ್ನ ವಿರುದ್ದ ಎಸ್ ಐಟಿ ತನಿಖೆಗೆ ಆಗ್ರಹ: ಗೃಹ ಸಚಿವರಿಂದ ಪರಿಶೀಲನೆ
ಶಾಸಕ ಮುನಿರತ್ನ ವಿರುದ್ಧ ಎಸ್ಐಟಿ ತನಿಖೆ ಮಾಡಲು ಸಚಿವರು ಶಾಸಕರು ಪತ್ರ ಕೊಟ್ಟಿದ್ದಾರೆ. ಪತ್ರದ ಮೇಲೆ ಮುಂದಿನ ಕ್ರಮ ಕೈಗೊಳ್ಳಿ ಎಂದು ಗೃಹ ಸಚಿವರಿಗೆ ಸೂಚನೆ ನೀಡಿದ್ದೇನೆ. ಶಾಸಕ ಮುನಿರತ್ನ ಮೇಲೆ ಬಹಳಷ್ಟು ಗಂಭೀರ ಪ್ರಕರಣಗಳು ಇದೆ. ಹೀಗಾಗಿ ವಿಶೇಷ ತನಿಖಾ ತಂಡದ ಅಗತ್ಯ ಇದೆ ಎಂದು ಕೇಳಿದ್ದಾರೆ. ಈ ಬಗ್ಗೆ ಗೃಹ ಸಚಿವರು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತಾರೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಗಣೇಶ ಮೆರವಣಿಗೆ ಗಲಾಟೆ ಬಿಜೆಪಿಯವರ ಕುಮ್ಮಕ್ಕಿನಿಂದಲೇ ನಡೆಯುತ್ತಿದೆ. ಬಿಜೆಪಿಯವರು ಕೋಮುವಾದಿಗಳು. ಅವರು ನೀಡುವ ಹೇಳಿಕೆಯಿಂದ ಗಲಾಟೆಗಳು ನಡೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದರು.
Key words: HDK, hit and run case, CM, Siddaramaiah