ರಾಮನಗರ,ಸೆಪ್ಟಂಬರ್,21,2024 (www.justkannada.in): ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಗೆಲುವು ಸಾಧಿಸಿ ನಂತರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಿ ಗೆದ್ದು ಈಗ ಕೇಂದ್ರ ಸಚಿವರಾಗಿರುವ ಹೆಚ್.ಡಿ ಕುಮಾರಸ್ವಾಮಿ ಬಗ್ಗೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ವ್ಯಂಗ್ಯವಾಡಿದ್ದಾರೆ.
ಈ ಬಗ್ಗೆ ರಾಮನಗರದಲ್ಲಿ ಮಾತನಾಡಿರುವ ಸಚಿವ ಜಮೀರ್ ಅಹ್ಮದ್ ಖಾನ್, ಹೆಚ್.ಡಿ ಕುಮಾರಸ್ವಾಮಿ ಮೊದಲು ರಾಮನಗರದಿಂದ ಚನ್ನಪಟ್ಟಣಕ್ಕೆ ಬಂದರು. ನಂತರ ಈಗ ಚನ್ನಪಟ್ಟಣದಿಂದ ಮಂಡ್ಯಕ್ಕೆ ಹೋಗಿದ್ದಾರೆ. ಭವಿಷ್ಯದಲ್ಲಿ ಹೆಚ್ ಡಿ ಕುಮಾರಸ್ವಾಮಿ ರಾಜ್ಯವನ್ನೇ ಬಿಟ್ಟು ಹೋಗುತ್ತಾರೆ ಎಂದು ಲೇವಡಿ ಮಾಡಿದರು.
ಚನ್ನಪಟ್ಟಣದವರನ್ನ ಕೇಳಿ ಹೆಚ್.ಡಿಕೆ ಕ್ಷೇತ್ರ ತೊರೆದರಾ? ಚನ್ನಪಟ್ಟಣದ ಜನತೆ ಅನುಮತಿ ಇಲ್ಲದೇ ಮಂಡ್ಯಕ್ಕೆ ಹೋದರಾ? ಎಚ್.ಡಿ ಕುಮಾರಸ್ವಾಮಿಗೆ ಚನ್ನಪಟ್ಟಣದ ಬಗ್ಗೆ ಕಾಳಜಿ ಇಲ್ಲ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ವಾಗ್ದಾಳಿ ನಡೆಸಿದರು.
Key words: HDK , will, leave, state, Minister, Jamir Ahmed Khan