ಬೆಂಗಳೂರು,ಜೂ,20,2020(www.justkananda.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು ಇದೀಗ ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಕೊರೋನಾಗೆ ಬಲಿಯಾಗಿದ್ದಾರೆ.
ಕಲಾಸಿ ಪಾಳ್ಯ ಪೊಲೀಸ್ ಠಾಣೆಯ 55 ವರ್ಷದ ಹೆಡ್ ಕಾನ್ಸ್ ಟೇಬಲ್ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಮೂಲಕ ಬೆಂಗಳೂರಿನಲ್ಲಿ ಮತ್ತೊಬ್ಬ ಕೊರೋನಾ ವಾರಿಯರ್ ಸಾವನ್ನಪ್ಪಿದ್ದಾರೆ. ಮೃತ ಹೆಡ್ ಕಾನ್ಸ್ ಟೇಬಲ್ ಗೆ ಮೂರು ದಿನಗಳ ಹಿಂದೆ ಕೊರೋನಾ ಸೋಂಕು ದೃಢಪಟ್ಟಿತ್ತು. ಇಂದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಇದೀಗ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಕೊರೋನಾದಿಂದ ಸಾವನ್ನಪ್ಪಿದ್ದವರ ಸಂಖ್ಯೆ 60ಕ್ಕೆ ಏರಿಕೆಯಾಗಿದೆ. ಇತ್ತೀಚೆಗಷ್ಟೇ ನಗರದ ವಿವಿಪುರಂ ಪೊಲೀಸ್ ಠಾಣೆಯ ಎಎಸ್ ಐ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದರು.
Key words: Head Constable –death- Corona -Bangalore.