ರಾಜ್ಯದಲ್ಲಿ ಡೆಂಗ್ಯೂಗೆ ಮೊದಲ ಬಲಿ: ಆರೋಗ್ಯ ಇಲಾಖೆ ಸಿಬ್ಬಂದಿ ಸಾವು

ಶಿವಮೊಗ್ಗ,ಜೂನ್,13,2024 (www.justkannada.n): ರಾಜ್ಯದಲ್ಲಿ ಡೆಂಗ್ಯೂಗೆ ಮೊದಲ ಬಲಿಯಾಗಿದ್ದು ಡೆಂಗ್ಯೂವಿನಿಂದ ಬಳಲುತ್ತಿದ್ದ ಆರೋಗ್ಯ ಇಲಾಖೆಯ ಸಿಬ್ಬಂದಿಯೇ ಸಾವನ್ನಪ್ಪಿದ್ದಾರೆ.

ಸಾಗರ ತಾಲ್ಲೂಕು ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸಿಬ್ಬಂದಿ ನಾಗರಾಜ್(35) ಡೆಂಗ್ಯೂನಿಂದ ಸಾವನ್ನಪ್ಪಿದ್ದಾರೆ. ನಾಗರಾಜ್ ಕಳೆದ ಕೆಲವು ದಿನಗಳಿಂದ ಡೆಂಗ್ಯೂನಿಂದ ಬಳಲುತ್ತಿದ್ದರು. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಿಸದೇ ಡೆಂಗ್ಯೂಗೆ ಆರೋಗ್ಯ ಇಲಾಖೆ ಸಿಬ್ಬಂದಿ ನಾಗರಾಜ್ ಬಲಿಯಾಗಿದ್ದಾರೆ.

ನಾಗರಾಜ್ ಶುಗರ್ ನಿಂದಲೂ ಬಳಲುತ್ತಿದ್ದರು ಎನ್ನಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ನಾಗರಾಜ್ ಡೆಂಗ್ಯೂನಿಂದ ಮೃತಪಟ್ಟಿರುವುದನ್ನು ಸಾಗರ ತಾಲ್ಲೂಕು ವೈದ್ಯಾಧಿಕಾರಿ ಡಾ.ಪರಪ್ಪ ದೃಢಪಡಿಸಿದ್ದಾರೆ.

Key words: health department –staff- died- dengue