ಮೈಸೂರು,ಅಕ್ಟೊಂಬರ್,04,2020(www.justkannada.in) : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆರೋಗ್ಯ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಪ್ರತಿಭಟನೆಯು 11ನೇ ದಿನಕ್ಕೆ ಕಾಲಿಟ್ಟಿದೆ.ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಬಳಿ ರಾಜ್ಯ ಸರ್ಕಾರದ ವಿರುದ್ಧ ಆರೋಗ್ಯ ಇಲಾಖೆ ಸಿಬ್ಬಂದಿ ಧಿಕ್ಕಾರ ಕೂಗಿದರು.
ಆರೋಗ್ಯ ಇಲಾಖೆ ಸಿಬ್ಬಂದಿ ಮೇಲೆ ರಾಜ್ಯ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ. ಸಮಾನ ವೇತನ ಹಾಗೂ ಸೇವಾ ಭದ್ರತೆ ಕಲ್ಪಿಸುವಲ್ಲಿ ವಿಫಲವಾಗಿದೆ ಎಂದು ಆಕ್ರೋಶವ್ಯಕ್ತಪಡಿಸಿದರು.ಕೋವಿಡ್ ಸಂದರ್ಭದಲ್ಲಿ ಕಾರ್ಯನಿರ್ವಹಿಸುವ ಆರೋಗ್ಯ ಸಿಬ್ಬಂದಿಗೆ ವಿಮಾ ಯೋಜನೆ ಕಲ್ಪಿಸಿಲ್ಲ. ನಮ್ಮ ನಿರಂತರ ಹೋರಾಟದ ಬಗ್ಗೆ ಗಮನಹರಿಸದೇ ನಿರ್ಲಕ್ಷ್ಯವಹಿಸಿದೆ. ಕೂಡಲೇ ಸರ್ಕಾರ ನಮ್ಮ ಬೇಡಿಕೆಗಳ ಈಡೇರಿಸದಿದ್ದಲ್ಲಿ ಪ್ರತಿಭಟನೆ ಉಗ್ರರೂಪ ತಾಳುವುದು ಎಂದು ಎಚ್ಚರಿಕೆ ನೀಡಿದರು.
key words : Health-Department-staff-protesting-11th