ಬೆಂಗಳೂರು, ಮೇ 16, 2021 (www.justkannada.in): ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರಿ ಮಳೆ ಸಾಧ್ಯತೆ ಇದೆ.
ಹೌದು. ‘ತೌಕ್ಟೆ’ ಚಂಡಮಾರುತದಿಂದ ರಾಜ್ಯದ ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ, ಮಲೆನಾಡು ಪ್ರದೇಶಗಳಾದ ಕೊಡಗು, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಹಾಗೂ ಉತ್ತರ ಕರ್ನಾಟಕದ ಬೆಳಗಾವಿ ಜಿಲ್ಲೆಗಳಲ್ಲಿ ಈಗಾಗಲೇ ಬಿರುಸಿನ ಮಳೆಯಾಗುತ್ತಿದೆ.
ಸದ್ಯ ತೌಕ್ಟೆ ಚಂಡಮಾರುತ ಅರಬ್ಬಿ ಸಮುದ್ರದ ಮಧ್ಯೆ ಭಾಗದಲ್ಲಿದೆ. ಇದು ತೀವ್ರಗೊಳ್ಳುತ್ತಾ ಉತ್ತರದ ಕಡೆ ಚಲಿಸುವ ಸಾಧ್ಯತೆ ಇದೆ. ಹೀಗಾಗಿ, ಕರಾವಳಿ ಪ್ರದೇಶಗಳಲ್ಲಿ ‘ರೆಡ್ ಅಲರ್ಟ್’ ಘೋಷಿಸಲಾಗಿದೆ.