ಬೆಂಗಳೂರು, ಆಗಸ್ಟ್ 20, 2023 (www.justkannada.in): ಇಂದಿನಿಂದ ಮುಂದಿನ ಐದು ದಿನಗಳ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ.
ಈ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತ ಉಂಟಾಗುವ ಎಚ್ಚರಿಕೆ ನೀಡಲಾಗಿದ್ದು, ಮುಂಜಾಗ್ರತ ಕ್ರಮವಾಗಿ ಅಪಾಯದ ಸ್ಥಳದಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸುವ ಕೆಲಸ ನಡೆದಿದೆ.
ಮುಂದಿನ 24 ಗಂಟೆಯಲ್ಲಿ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ದಕ್ಷಿಣ ಕನ್ನಡ, ಉತ್ತಕನ್ನಡ, ಹಾಗೂ ಉಡುಪಿ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಳೆ ಮಾಯವಾದ ಹಿನ್ನೆಲೆಯಲ್ಲಿ ರೈತರಲ್ಲಿ ಆತಂಕ ಮನೆ ಮಾಡಿತ್ತು. ಈ ನಡುವೆಯೇ ಈಗ ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯಾದ್ರೆ ಕೊಪ್ಪಳ, ಬೆಂಗಳೂರು ಮತ್ತು ದಾವಣಗೆರೆಯಲ್ಲಿ ಸಾಧಾರಣ ಮಳೆ ಸುರಿದಿದೆ.