ಬೆಂಗಳೂರು,ಜೂನ್,12,2023(www.justkannada.in): ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿ ರಾಜ್ಯದೆಲ್ಲಡೆ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗಿನಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಹವಮಾನ ಇಲಾಖೆ ಸೂಚನೆ ನೀಡಿದೆ.
ಅರಬ್ಬಿ ಸಮುದ್ರದಲ್ಲಿ ಬಿಪರ್ ಜಾಯ್ ಚಂಡಮಾರುತದ ಅಬ್ಬರ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಇನ್ನೂ ಎರಡು ದಿನಗಳ ಕಾಲ ಸೈಕ್ಲೋನ್ ಇರಲಿದ್ದು, ಮೀನಗಾರರು ಸಮುದ್ರದ ಬಳಿ ತೆರಳದಂತೆ ಸೂಚನೆ ನೀಡಲಾಗಿದೆ.
Key words: Heavy rain – likely – four days – state.