ಮಹಾರಾಷ್ಟ್ರದಲ್ಲಿ ಭಾರಿ ಮಳೆ ಹಿನ್ನೆಲೆ: ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ 7  ಬ್ರಿಡ್ಜ್ ಗಳು ಜಲಾವೃತ…

ಬೆಳಗಾವಿ,ಸೆ,7,2019(www.justkannada.in):  ಮಹಾರಾಷ್ಟ್ರದ  ಕೊಂಕಣ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ 7 ಸೇತುವೆಗಳು ಜಲಾವೃತವಾಗಿದೆ.

ಮಹಾರಾಷ್ಟ್ರದಲ್ಲಿ ಮತ್ತೆ ಮಳೆಯಾಗುತ್ತಿದ್ದು ಇದರಿಂದಾಗಿ ಕೃಷ್ಣಾ ನದಿಯ ಎರಡು ಬ್ರಿಡ್ಜ್ ಗಳು ದೂದ್ ಗಂಗಾದ ಎರಡು ಸೇತುವೆಗಳು ಹಾಗೂ ವೇದಗಂಗಾದ ಮೂರು ಸೇತುವೆಗಳು ಜಲಾವೃತವಾಗಿವೆ. ಮಹಾರಾಷ್ಟ್ರದ ಮಹಾಬಲೇಶ್ವರ ವಾರಣಾ ಸೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಈ ಹಿನ್ನೆಲೆ  ಕೊಯ್ನಾ ಜಲಾಶಯದಿಂದ  ಕೃಷ್ಣಾ ನದಿಗೆ ಹೆಚ್ಚಾಗಿ ನೀರು ಹರಿದು ಬರುತ್ತಿದೆ. ಇದರಿಂದಾಗಿ ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಭೀತಿ ಉಂಟಾಗಿದೆ.

ಕೊಯ್ನಾ ಜಲಾಶಯದಿಂದ ಭಾರೀ ನೀರು ಬಿಡುಗಡೆಯಾದ ಹಿನ್ನೆಲೆಯಲ್ಲಿ ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ ಜಿಲ್ಲಾಡಳಿತ ಹೈ ಅಲರ್ಟ್ ಘೋಷಿಸಿದ್ದು, ಸುರಕ್ಷಿತ ಸ್ಥಳಗಳಿಗೆ ಹೋಗುವಂತೆ ಸೂಚನೆ ನೀಡಿದೆ.

Key words: Heavy Rain – Maharashtra- 7 bridges -chikkodi