ದಕ್ಷಿಣ ಕನ್ನಡ,ಜುಲೈ,7,2022(www.justkannada.in): ರಾಜ್ಯದ ಹಲವು ಭಾಗಗಳಲ್ಲಿ ನಿರಂತರವಾಗಿ ವರುಣ ಆರ್ಭಟಿಸುತ್ತಿದ್ದು, ಈ ನಡುವೆ ಭಾರಿ ಮಳೆ ಮುನ್ಸೂಚನೆ ಹಿನ್ನೆಲೆ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ,ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆ ಹಿನ್ನೆಲೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.ಕಳೆದ 2-3 ದಿನಗಳಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದ್ದು, ರಾಜ್ಯದ 22 ಭಾಗದಲ್ಲಿ ಭಾರಿ ಮಳೆ ಆಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೊಡಗು ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಆರೆಂಜ್ ಅಲರ್ಟ್, ಬೆಳಗಾವಿ,ಧಾರವಾಡ ಸೇರಿ 6 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಕೊಡಗು ಜಿಲ್ಲೆಯಾದ್ಯಂತ ಮಳೆರಾಯನ ಅಬ್ಬರ ಮುಂದುವರೆದಿದ್ದು, ಭಾರಿ ಮಳೆಗೆ ಮಡಿಕೇರಿ -ಚೆಟ್ಟಳ್ಳಿ ರಸ್ತೆಯಲ್ಲಿ ಭೂ ಕುಸಿತ ಉಂಟಾಗಿ ವಾಹನ ಸಂಚಾರ ಸ್ಥಗಿತಗೊಂಡಿದೆ. ನಿರಂತರ ಮಳೆ ಹಿನ್ನೆಲೆ ಕೊಡಗು ಜಿಲ್ಲೆಯಲ್ಲಿ ಶಾಲಾ-ಕಾಲೇಜಿಗೆ ನಾಳೆಯೂ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಬಿ.ಸಿ ಸತೀಶ್ ಆದೇಶ ಹೊರಡಿಸಿದ್ದಾರೆ.
ಇನ್ನು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆ, ರಾಮನಗರ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ದೊರೆತಿದೆ.
Key words: Heavy rain -Red alert –coastal -districts