ಬೆಂಗಳೂರು,ಅಕ್ಟೋಬರ್,12,2020(www.justkannada.in): ಮುಂದಿನ ಮೂರು ದಿನಗಳಲ್ಲಿ ರಾಜ್ಯಾಧ್ಯಂತ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಮಳೆ ಕುರಿತು ಮಾಹಿತಿ ರಾಜ್ಯ ಹವಾಮಾನ ಇಲಾಖೆ ನೀಡಿದ್ದು, ಮುಂದಿನ ಮೂರು ದಿನಗಳ ಕಾಲ ರಾಜ್ಯಾಧ್ಯಂತ ಭಾರೀ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಯಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನೂ ಕರಾವಳಿ ಭಾಗಗಳಲ್ಲಿಯೂ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆ ಸುರಿಯಲಿದೆ. ಹೀಗಾಗಿ ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಕರಾವಳಿ ಭಾಗದ ಜನರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಇನ್ನೊಂದೆಡೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ನಾಳೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
Key words: Heavy rain – state-next- three days-Yellow Alert -Coastal Side.