ಬೆಂಗಳೂರು, ಸೆಪ್ಟೆಂಬರ್ 09, 2021 (www.justkannada.in): ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 12ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಬೆಳಗಾವಿ, ಕೊಪ್ಪಳ, ಗದಗ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಕರಾವಳಿ ತೀರದಲ್ಲಿ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ.
ಕರ್ನಾಟಕ ಮಾತ್ರವಲ್ಲದೆ ಒರಿಸ್ಸಾ, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ತಮಿಳುನಾಡು, ಛತ್ತೀಸ್ಗಢದಲ್ಲೂ ವಿಪರೀತ ಮಳೆಯಾಗುವ ಸಾಧ್ಯತೆಯಿದೆ.
ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆಯೆಲ್ಲೊ ಅಲರ್ಟ್ ನೀಡಲಾಗಿದೆ.
key words: Heavy rains are possible across the state and coastal areas up to Sep 12