ಬೆಂಗಳೂರು,ನವೆಂಬರ್,9,2023(www.justkannada.in): ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ರಾಜ್ಯಾದ್ಯಂತ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ವಿಜಯನಗರ, ತುಮಕೂರು, ಮೈಸೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರದಲ್ಲಿ ಸಾಧಾರಣ ಮಳೆಯಾಗಲಿದೆ.
ಕರಾವಳಿಯ ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ನವೆಂಬರ್ 12ರವರೆಗೆ ಮಳೆ ಇರಲಿದ್ದು, ಬಳಿಕ ಒಣಹವೆ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.
Key words: Heavy rains – state – Meteorological- Department- forecast.