ಜನಿವಾರ ತೆಗೆಸಿದ ಕೇಸ್: ಹೈಕೋರ್ಟ್​ಗೆ PIL ಸಲ್ಲಿಕೆ, ಮರು ಪರೀಕ್ಷೆಗೆ ಮನವಿ

ಬೆಂಗಳೂರು, ಏಪ್ರಿಲ್​ 26,2025 (www.justkannada.in):  ಸಿಇಟಿ ಪರೀಕ್ಷೆ  ವೇಳೆ ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು ಮರು ಪರೀಕ್ಷೆಗೆ ಮನವಿ ಮಾಡಿದೆ.

ಜನಿವಾರ ತೆಗೆಸಿದ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸಂಚಲನಕ್ಕೆ ಕಾರಣವಾಗಿತ್ತು. ಎಲ್ಲೆಡೆ ಪ್ರತಿಭಟನೆ ಮಾಡುವ ಮೂಲಕ ಜನರು ಆಕ್ರೋಶ ಹೊರಹಾಕಿದ್ದರು. ಇದೀಗ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಿಂದ ಹೈಕೋರ್ಟ್​ಗೆ ಪಿಐಎಲ್​ ಅರ್ಜಿ ಸಲ್ಲಿಸಿದೆ. ಮರು ಸಿಇಟಿ ಪರೀಕ್ಷೆ ಮಾಡಲು ಅರ್ಜಿದಾರರ ಪರ ವಕೀಲ ಮನವಿ ಮಾಡಿದ್ದು, ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ಬಳಿಕ  ಜೂನ್ 9ಕ್ಕೆ ವಿಚಾರಣೆ ನಿಗದಿಪಡಿಸಲಾಗಿದೆ.

ವೃತ್ತಿಪರ ಕೋರ್ಸ್‌ಗಳಿಗಾಗಿ ಏಪ್ರಿಲ್‌ 16 ರಂದು ಸಿಇಟಿ ಪರೀಕ್ಷೆ ನಡೆದಿತ್ತು. ಈ ವೇಳೆ ಶಿವಮೊಗ್ಗದಲ್ಲಿ ಇಬ್ಬರು ವಿದ್ಯಾರ್ಥಿಗಳ ಜನಿವಾರ ತೆಗೆಸಿ ಪರೀಕ್ಷಾ ಕೇಂದ್ರದ ಒಳಗೆ ಬಿಡಲಾಗಿತ್ತು. ಬೀದರ್‌ ನಲ್ಲಿ ಜನಿವಾರ ತೆಗೆಯೋದಿಲ್ಲ ಎಂದಿದ್ದಕ್ಕೆ ವಿದ್ಯಾರ್ಥಿಯನ್ನ ಪರೀಕ್ಷಾ ಕೇಂದ್ರದ ಒಳಗೆ ಬಿಟ್ಟಿರಲಿಲ್ಲ. ಇದಕ್ಕೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

Key words: Janivara Case, PIL, High Court