ಬೆಂಗಳೂರು, ಜೂನ್ 18,2024 (www.justkannada.in): ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯನ್ನು ಅಪಹರಣ ಮಾಡಿದ ಕೇಸ್ ನಲ್ಲಿ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ.
ನ್ಯಾ. ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಭವಾನಿ ರೇವಣ್ಣ ಅವರು ಮೈಸೂರು, ಹಾಸನ ಜಿಲ್ಲೆ ಪ್ರವೇಶಿಸದಂತೆ ಷರತ್ತು ವಿಧಿಸಿ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.
ಪೊಲೀಸರ 85 ಪ್ರಶ್ನೆಗಳಿಗೆ ಭವಾನಿ ರೇವಣ್ಣ ಅವರು ಉತ್ತರಿಸಿದ್ದಾರೆ. ಹೀಗಾಗಿ ತನಿಖೆಗೆ ಸಹಕರಿಸಿಲ್ಲ ಎಂಬ ವಾದ ಒಪ್ಪಲಾಗುವುದಿಲ್ಲ. ಪೊಲೀಸರಿಗೆ ಬೇಕಾದಂತಹ ಉತ್ತರ ಕೊಡಬೇಕೆಂದಿಲ್ಲ. ಸಂತ್ರಸ್ತೆಗೆ ಊಟ ಬಟ್ಟೆ ಕೊಟ್ಟಿಲ್ಲವೆಂಬ ವಾದವನ್ನು ಒಪ್ಪಲಾಗುವುದಿಲ್ಲ. ಅಕ್ಕ (ಭವಾನಿ ರೇವಣ್ಣ) ಬಟ್ಟೆ ಊಟ ಕಳುಹಿಸಿದ್ದರೆಂದು ಸಂತ್ರಸ್ತೆ ಹೇಳಿಕೆಯಿದೆ ಎಂದು ನ್ಯಾಯಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.
ಪ್ರಕರಣ ಸಂಬಂಧ ನನ್ನ ತಾಯಿಯ ಕಣ್ಮರೆಯಾಗಿದ್ದಾರೆ ಎಂದು ಮೈಸೂರಿನ ಕೆಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಪುತ್ರ ದೂರು ನೀಡಿದ್ದರು. ಹೆಚ್ಡಿ ರೇವಣ್ಣ, ಭವಾನಿ ರೇವಣ್ಣ ಮತ್ತು ಭವಾನಿ ರೇವಣ್ಣ ಸಂಬಂಧಿ ಬಾಬು ವಿರುದ್ಧ ದೂರು ದಾಖಲಾಗಿದೆ.
Key words: High Court, anticipatory bail, Bhavani Revanna