ಬೆಂಗಳೂರು.ಮಾರ್ಚ್,22,2024(www.justkannada.in): 5,8,9,11ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಒಪ್ಪಿಗೆ ಸೂಚಿಸಿದೆ. ಸರಕಾರದ ಮೇಲ್ಮನವಿ ಮಾನ್ಯ ಮಾಡಿದ ಹೈಕೋರ್ಟ್ ವಿಭಾಗೀಯಪೀಠ. ಆದಷ್ಟು ಬೇಗ ಉಳಿದ ಪರೀಕ್ಷೆಗಳನ್ನು ಪೂರ್ಣಗೊಳಿಸಲು ಸೂಚನೆ ನೀಡಿದೆ.
ಮುಂದಿನ ಶೈಕ್ಷಣಿಕ ವರ್ಷದ ಪರೀಕ್ಷೆಯ ವೇಳೆ ಸಂಬಂಧಪಟ್ಟವರೊಂದಿಗೆ ಸಮಾಲೋಚಿಸಲು ಶಿಕ್ಷಣ ಇಲಾಖೆಗೆ ಹೈಕೋರ್ಟ್ ನ ನ್ಯಾ.ಕೆ. ಸೋಮಶೇಖರ್, ನ್ಯಾ. ರಾಜೇಶ್ ರೈ .ಕೆ ಅವರಿದ್ದ ಪೀಠ ಆದೇಶಿಸಿದೆ.
ಏಕಸದಸ್ಯ ಪೀಠ ಶಾಲೆಗಳ ಬೋರ್ಡ್ ಪರೀಕ್ಷೆ ರದ್ದುಪಡಿಸಿತ್ತು. ಏಕಸದಸ್ಯ ಪೀಠದ ತೀರ್ಪನ್ನು ರದ್ದುಪಡಿಸಿದ ಹೈಕೋರ್ಟ್ ವಿಭಾಗೀಯಪೀಠ ಇದೀಗ ಬೋರ್ಡ್ ಪರೀಕ್ಷೆಗೆ ಅವಕಾಶ ನೀಡಿದೆ.
Key words: High Court –approves- 5th, 8th, 9th, 11th class- board exam.