ಬೆಂಗಳೂರು, ಅಕ್ಟೋಬರ್,4,2023(www.justkannada.in): ಬೆಂಗಳೂರಿನಲ್ಲಿ ಸಾರ್ವಜನಿಕ ಶೌಚಾಲಯಗಳ ನಿರ್ವಹಣೆ ಕೊರತೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ 5 ಲಕ್ಷ ರೂ. ದಂಡ ವಿಧಿಸಿದೆ.
ಬೆಂಗಳೂರು ನಗರದಲ್ಲಿ ಸಾರ್ವಜನಿಕ ಶೌಚಾಲಯಗಳನಿರ್ವಹಣೆ ಕೊರತೆಗೆ ಕೈಗೊಂಡ ಕ್ರಮದ ಬಗ್ಗೆ ಹೈಕೋರ್ಟ್ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದ್ದು, ಸರ್ಕಾರದ ನಿರ್ಲಕ್ಷ್ಯಕ್ಕೆ ಹೈಕೋರ್ಟ್ 5 ಲಕ್ಷ ರೂಪಾಯಿ ದಂಡ ವಿಧಿಸಿದೆ.
ಸಿಜೆ ಪ್ರಸನ್ನ ಬಿ.ವರಾಳೆ, ನ್ಯಾ.ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ ಆದೇಶಿಸಿದ್ದು, ನವೆಂಬರ್ 2ರಂದು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಖುದ್ದು ಹಾಜರಾಗುವಂತೆ ಹೈಕೋರ್ಟ್ ಸೂಚನೆ ನೀಡಿದೆ.
ಲೆಟ್ಜ್ ಕಿಟ್ ಫೌಂಡೇಶನ್ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ಮಾಡಿರುವ ಹೈಕೋರ್ಟ್ ಬೆಂಗಳೂರಿನ ನಿವಾಸಿಗಳ ಬಗ್ಗೆ ಸರ್ಕಾರ ಜವಾಬ್ದಾರಿಯುತವಾಗಿರಬೇಕು. ಶೌಚಾಲಯಗಳ ನಿರ್ಮಾಣ, ನೈರ್ಮಲ್ಯದ ಬಗ್ಗೆ ವರದಿಗೆ ಸೂಚಿಸಿತ್ತು. ಆದರೆ ವರದಿ ಸಲ್ಲಿಸಿಲ್ಲವೆಂದು ಅರ್ಜಿದಾರರ ಪರ ಹಿರಿಯ ವಕೀಲ ಪುತ್ತಿಗೆ ರಮೇಶ್ ವಾದ ಮಂಡಿಸಿದ್ದಾರೆ.
Key words: High Court- Fined – 5 lakh – state government