ಬೆಂಗಳೂರು,ಏಪ್ರಿಲ್,5,2021(www.justkannada.in): ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಪ್ರಗತಿ ವರದಿ ಸಲ್ಲಿಸುವಂತೆ ಎಸ್ ಐಟಿಗೆ ಹೈಕೋರ್ಟ್ ಸೂಚನೆ ನೀಡಿದೆ.
ಸಿಡಿ ಪ್ರಕರಣದ ತನಿಖೆಯನ್ನ ಸಿಬಿಐಗೆ ವಹಿಸುವಂತೆ ಕೋರಿ ವಕೀಲ ಉಮೇಶ್ ಎಂಬುವವರು ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದರು. ಈ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಸರ್ಕಾರ ಮತ್ತು ಎಸ್ ಐಟಿಗೆ ನೋಟಿಸ್ ನೀಡಿದೆ.
ಹಾಗೆಯೇ ಎಸ್ ಐಟಿಗೆ ಸಿಡಿ ಪ್ರಕರಣದ ತನಿಖಾ ಪ್ರಗತಿ ವರದಿಯನ್ನ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಸೂಚನೆ ನೀಡಿ ವಿಚಾರಣೆಯನ್ನ ಏಪ್ರಿಲ್ 17ಕ್ಕೆ ಮುಂದೂಡಿದೆ.
Key words: High Court- instructs- SIT – submit -investigation report – CD case.