ಬೆಂಗಳೂರು, ಮಾರ್ಚ್, 22,2024(www.justkannada.in): ಹನುಮಾನ್ ಚಾಲೀಸಾ ಹಾಕಿದ್ದ ಅಂಗಡಿ ಮಾಲೀಕನ ಮೇಲೆ ಹಲ್ಲೆ ಖಂಡಿಸಿ ನಗರತ್ ಪೇಟೆಯಲ್ಲಿ ಪ್ರತಿಭಟನೆ ನಡೆಸಿದ್ದಕ್ಕೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ದ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ನಗರತ್ ಪೇಟೆಯಲ್ಲಿ ಹನುಮಾನ್ ಚಾಲೀಸಾ ಹಾಕಿದ ಮೊಬೈಲ್ ಅಂಗಡಿ ಮಾಲೀಕನ ಮೇಲೆ ಹಲ್ಲೆ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿದ್ದರು. ಹಲ್ಲೆ ಖಂಡಿಸಿ, ಬಿಜೆಪಿಯಿಂದ ಪ್ರತಿಭಟನೆ ನಡೆದಿತ್ತು. ಈ ಸಂಬಂಧ ಕಾಂಗ್ರೆಸ್ ದೂರು ನೀಡಿದ ಹಿನ್ನೆಲೆ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಸಂಸದ ತೇಜಸ್ವಿ ಸೂರ್ಯ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರನ್ನೊಳಗೊಂಡ ನ್ಯಾಯಪೀಠವು ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ.
Key words: High Court- interim injunction – case- against- MP -Tejaswi Surya.