ಬೆಂಗಳೂರು, ಮಾರ್ಚ್, 3,2023(www.justkannada.in): 50 ಲಕ್ಷದ ಕಾಮಗಾರಿಗಳನ್ನು ಪುತ್ರರಿಗೇ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ನೆಹರು ಓಲೇಕಾರ್ಗೆ ಹೈಕೋರ್ಟ್ ರಿಲೀಫ್ ನೀಡಿದೆ. ಜನಪ್ರತಿನಿಧಿಗಳ ನ್ಯಾಯಾಲಯ ವಿಧಿಸಿದ್ಧ 2 ವರ್ಷ ಶಿಕ್ಷೆ ಅಮಾನತ್ತಿನಲ್ಲಿಟ್ಟು ಜಾಮೀನು ಮಂಜೂರು ಮಾಡಿದೆ.
ಕಾಂಕ್ರೀಟ್ ರಸ್ತೆ ಸೇರಿ ಕೆಲ ಕಾಮಗಾರಿ ನಡೆಸಿದ ಆರೋಪದಡಿ ಶಾಸಕ ನೆಹರು ಓಲೇಕಾರ್ ಪುತ್ರರಾದ ಮಂಜುನಾಥ್ ಮತ್ತು ದೇವರಾಜ್ ಓಲೇಕಾರ್ ವಿರುದ್ಧ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಶಿಕ್ಷೆ ವಿಧಿಸಿತ್ತು. ಈ ಹಿನ್ನೆಲೆಯಲ್ಲಿ ಶಾಸಕ ನೆಹರು ಓಲೇಕಾರ್ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ 2 ವರ್ಷ ಶಿಕ್ಷೆ ಅಮಾನತ್ತಿನಲ್ಲಿಟ್ಟು ಜಾಮೀನು ಮಂಜೂರು ಮಾಡಿದೆ.
50 ಲಕ್ಷ ರೂ. ಮೊತ್ತದ ಕಾಮಗಾರಿ ಪುತ್ರರಿಗೇ ನೀಡಿದ ಆರೋಪ ಹಾವೇರಿ ಬಿಜೆಪಿ ಶಾಸಕ ನೆಹರು ಓಲೆಕಾರ್ ವಿರುದ್ಧ ಕೇಳಿ ಬಂದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ರರಾದ ಮಂಜುನಾಥ್, ದೇವರಾಜ್ ಓಲೆಕಾರ್ಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ 2 ವರ್ಷ ಜೈಲುಶಿಕ್ಷೆ ವಿಧಿಸಿತ್ತು. ಕಾಂಕ್ರೀಟ್ ರಸ್ತೆ ಸೇರಿದಂತೆ ಕೆಲ ಕಾಮಗಾರಿಯಲ್ಲಿ ಶಾಸಕ ಓಲೆಕಾರ್ ವಿರುದ್ಧ ಸ್ವಜನ ಪಕ್ಷಪಾತ ಆರೋಪಿಸಿತ್ತು.
Key words: High Court – MLA -Nehru Olekar-Sentence -suspended – bail -granted