ಮೈಸೂರು,ಫೆಬ್ರವರಿ,25,2021(www.justkannada.in): ಚುನಾವಣೆ ವೇಳೆ ಆಸ್ತಿ ವಿವರ ಮುಚ್ಚಿಟ್ಟ ಆರೋಪದ ಮೇಲೆ ಮೈಸೂರು ಜಿಲ್ಲಾ ನ್ಯಾಯಾಲಯ ನೀಡಿದ್ದ ಮೈಸೂರು ಪಾಲಿಕೆ ಮೇಯರ್ ರುಕ್ಮಿಣಿ ಮಾದೇಗೌಡ ಅವರ ಆಯ್ಕೆ ಅಸಿಂಧು ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನ ಹೈಕೋರ್ಟ್ ಮುಂದೂಡಿದೆ.
ಚುನಾವಣೆ ವೇಳೆ ಆಸ್ತಿ ವಿವರ ಮುಚ್ಚಿಟ್ಟ ಆರೋಪದ ಮೇಲೆ ಮೈಸೂರು ಪಾಲಿಕೆ ಮೇಯರ್ ರುಕ್ಮಿಣಿ ಮಾದೇಗೌಡ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ರಜಿನಿ ಅಣ್ಣಯ್ಯ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಸದಸ್ಯತ್ವ ರದ್ದು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಮೈಸೂರು ಜಿಲ್ಲಾ ನ್ಯಾಯಾಲಯ ರುಕ್ಮಿಣಿ ಮಾದೇಗೌಡ ಆಯ್ಕೆ ಅಸಿಂಧುಗೊಳಿಸಿತ್ತು.
ಜಿಲ್ಲಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ರುಕ್ಮಿಣಿ ಮಾದೇಗೌಡ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ನಂತರ ಜಿಲ್ಲಾ ನ್ಯಾಯಾಲಯ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿತ್ತು.
ಆದರೆ ಪ್ರತಿವಾದಿಗಳಿಗೆ ಹೈಕೋರ್ಟ್ ನೋಟಿಸ್ ತಲುಪದ ಹಿನ್ನೆಲೆಯಲ್ಲಿ ಹೈಕೋರ್ಟ್ ಏಕಸದಸ್ಯ ಪೀಠ ವಿಚಾರಣೆಯನ್ನ ಮುಂದೂಡಿದೆ.
Key words: High Court –postpones- hearing -Mayor Rukmini’s- petition