ಶಾಸಕ ವಿ.ಸುನೀಲ್ ಕುಮಾರ್ ವಿರುದ್ದದ ಮಾನನಷ್ಟ ಪ್ರಕರಣ ರದ್ಧಿಗೆ ಹೈಕೋರ್ಟ್ ನಕಾರ

ಬೆಂಗಳೂರು,ಸೆಪ್ಟಂಬರ್, 13, 2024(www.justkannada.in):  ತಮ್ಮ ವಿರುದ್ದ ದಾಖಲಾಗಿರುವ ಮಾನನಷ್ಟ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಶಾಸಕ ಹಾಗೂ ಮಾಜಿ ಸಚಿವ ವಿ.ಸುನೀಲ್ ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ.

ಈ ಮೂಲಕ ಶಾಸಕ ವಿ.ಸುನೀಲ್ ಕುಮಾರ್ ವಿರುದ್ದ ದಾಖಲಾಗಿದ್ದ ಮಾನನಷ್ಟ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ.  ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳದಲ್ಲಿ ಭಾಷಣ ಮಾಡುವ ವೇಳೆ ಬಿಜೆಪಿ ಅಭ್ಯರ್ಥಿಯಾಗಿದ್ದ ವಿ. ಸುನೀಲ್ ಕುಮಾರ್ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ಸುನೀಲ್ ಕುಮಾರ್ ಮಾನಹಾನಿಕರ ಹೇಳಿಕೆ ನೀಡಿದ್ದಾರೆಂದು ಪ್ರಮೋದ್ ಮುತಾಲಿಕ್ ದೂರು ಸಲ್ಲಿಸಿದ್ದರು.  ತಮ್ಮ ವಿರುದ್ಧದ ಮಾನನಷ್ಟ ಪ್ರಕರಣವನ್ನು ರದ್ದುಗೊಳಿಸಬೇಕೆಂದು ಶಾಸಕ ಸುನಿಲ್ ಕುಮಾರ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸುನಿಲ್ ಕುಮಾರ್‌ ಹಾಗೂ  ಪಕ್ಷೇತರ ಅಭ್ಯರ್ಥಿಯಾಗಿ ಪ್ರಮೋದ್ ಮುತಾಲಿಕ್ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಸುನೀಲ್ ಕುಮಾರ್ ಗೆಲುವು ಸಾಧಿಸಿದ್ದರು.

ಚುನಾವಣೆಯ ಫಲಿತಾಂಶದ ಬಳಿಕ ಕಾರ್ಕಳದಲ್ಲಿ ಭಾಷಣ ಮಾಡುವಾಗ ಶಾಸಕ ಸುನೀಲ್ ಕುಮಾರ್ ಪ್ರಮೋದ್ ಮುತಾಲಿಕ್ ವಿರುದ್ಧ ಮಾತನಾಡಿದ್ದರು ಎನ್ನಲಾಗಿದೆ.   ಈ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ಸುನೀಲ್ ಕುಮಾರ್ ಮಾನಹಾನಿಯ ಹೇಳಿಕೆ ನೀಡಿದ್ದಾರೆ ಆರೋಪಿಸಿ ಪ್ರಮೋದ್ ಮುತಾಲಿಕ್ ದೂರು ನೀಡಿದ್ದರು.

Key words: High Court, refuses, quash, defamation case, V. Sunil Kumar